ಚಿಕ್ಕಮಗಳೂರು: ಸಂಸಾರ ತ್ಯಜಿಸಿ ಓಡಿಹೋದ ಪತ್ನಿ; ಪುತ್ರಿ ಸೇರಿ ಮೂವರಿಗೆ ಗುಂಡಿಟ್ಟು ಕೊಂದು, ಪತಿ ತಾನು ಸಾವಿಗೆ ಶರಣು

ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತೆ ನಾದಿನಿ ಸಿಂಧು(24) ಗುಂಡು ತಗುಲಿ ಮೃತಪಟ್ಟಿದ್ದಾರೆ.
representational image
ಸಾಂದರ್ಭಿಕ ಚಿತ್ರ
Updated on

ಬಾಳೆಹೊನ್ನೂರು: ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌.

ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತೆ ನಾದಿನಿ ಸಿಂಧು(24) ಗುಂಡು ತಗುಲಿ ಮೃತಪಟ್ಟಿದ್ದಾರೆ. ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರತ್ನಾಕರ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಾಲೆಯಲ್ಲಿ ಮಗಳ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತಾರೆ ಎಂದು ಅಪ್ಪ ರತ್ನಾಕರ್ ಬಳಿ ಮೌಲ್ಯ ಅಳಲು ತೋಡಿಕೊಂಡಿದ್ದಳು. ಇದರಿಂದ ಮನನೊಂದಿದ್ದ ರತ್ನಾಕರ್ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ಮನೆಗೆ ತೆರಳಿ, ಅತ್ತೆ, ನಾದಿನಿ ಹಾಗೂ ಮಗಳನ್ನು ನಾಡಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.

ಹತ್ಯೆಯ ಬಳಿಕ ರತ್ನಾಕರ್, ಸೆಲ್ಫಿ ವಿಡಿಯೋ ಮಾಡಿ ಸಂಸಾರದ ನೋವನ್ನು ತೋಡಿಕೊಂಡಿದ್ದಾನೆ. ನನ್ನ ಹೆಂಡತಿ ಮೋಸ ಮಾಡಿ ಹೋಗಿ 2 ವರ್ಷ ಆಯ್ತು. ಮಗಳನ್ನು ಬೇಡ ಅಂತ ಬಿಟ್ಟು ಹೋಗಿದ್ದಾಳೆ. ಈಗ ಶಾಲೆಯಲ್ಲಿ ನನ್ನ ಮಗಳಿಗೆ ಆಕೆಯ ಸ್ನೇಹಿತರು ನಿನ್ನ ಅಮ್ಮ ಎಲ್ಲಿ ಎಂದು ಕೇಳುತ್ತಾರೆ. ಮಗಳು ಆಲ್ಬಂನಿಂದ ಅಮ್ಮನ ಫೋಟೋ ತೆಗೆದುಕೊಂಡು ಹೋಗಿ ಈಕೆಯೇ ನನ್ನ ಅಮ್ಮ ಅಂತ ತೋರಿಸಿದ್ದಾಳೆ ಎಂದು ವಿಡಿಯೋದಲ್ಲಿ ರತ್ನಾಕರ್ ನೋವನ್ನು ವ್ಯಕ್ತಪಡಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

representational image
ಪತ್ನಿ ಹತ್ಯೆ ಮಾಡಿ ಶವ ಸೂಟ್ ಕೇಸ್ ನಲ್ಲಿ ತುಂಬಿಸಿದ್ದ ಪತಿಗೆ 14 ದಿನ ನ್ಯಾಯಾಂಗ ಬಂಧನ: ಆರೋಪಿ ಪರಪ್ಪನ ಅಗ್ರಹಾರ ಜೈಲಿಗೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com