ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ: ಸಿಎಂ ಸಿದ್ದರಾಮಯ್ಯ

ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದರು.
CM Siddaramaiah, Dr.G. Parameshwar
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್
Updated on

ಬೆಂಗಳೂರು: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದ ಸಿದ್ದರಾಮಯ್ಯ, ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದರು.

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಗೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಂತಿ ಪಾಲನೆ ಉತ್ತಮವಾಗಿರಬೇಕು ಎಂದರು. ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಅಪಾರ ಮೆಚ್ಚುಗೆಯ ವಿಷಯ ಎಂದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದರು. ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

CM Siddaramaiah, Dr.G. Parameshwar
ಸಿಎಂ ಸಚಿವಾಲಯದಲ್ಲಿನ 30 ಸಿಬ್ಬಂದಿಯನ್ನು ಕಿತ್ತೆಸೆದ ಸಿದ್ದರಾಮಯ್ಯ ಸರ್ಕಾರ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com