
ಬೆಂಗಳೂರು: ನಗರದ ಕೆಲ ಭಾಗಗಳಲ್ಲಿ ಬೆಳಗ್ಗೆಯೇ ತುಂತುರು ಮಳೆಯಾಗುತ್ತಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದ್ಧು, ಕೆಲ ಗಂಟೆಗಳಲ್ಲೇ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ದಾಸರಹಳ್ಳಿ, ಪೀಣ್ಯ, ಎಂಟನೇ ಮೈಲಿ ಸುತ್ತಮುತ್ತ ತುಂತುರು ಮಳೆಯಾಗಿದೆ.
ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮತ್ತು ನಾಳೆ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ಬಿಸಿಲ ಬೇಗೆಗೆ ಜನ ಬಸವಳಿದು ಹೋಗಿದ್ದಾರೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಮೈಸೂರು, ಚಿತ್ರದುರ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ.
ಹಾಸನ, ಮೈಸೂರು, ಚಿತ್ರದುರ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ.
Advertisement