ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!

ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್​ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಅಲ್ಲದೆ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್​ 9ಕ್ಕೆ ಮುಂದೂಡಿದೆ. ಕೆ.ಆರ್‌ ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದೇ ವೇಳೆ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದರು. ಆರೋಪ ಓದಿ ಹೇಳುವಾಗ ನ್ಯಾಯಾಧೀಶರ ಮುಂದೆಯೇ ಕೈ ಮುಗಿದು ಪ್ರಜ್ವಲ್‌ ರೇವಣ್ಣ ಕಣ್ಣೀರು ಹಾಕಿದ ಘಟನೆ ನಡೆಯಿತು.

ಸಂಗ್ರಹ ಚಿತ್ರ
ಬೆಂಗಳೂರು: ಬಿಹಾರ ಯುವತಿ ಅಪಹರಿಸಿ ಅತ್ಯಾಚಾರ; ಇಬ್ಬರ ಬಂಧನ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com