BMRCL: ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘನೆ; 6 ತಿಂಗಳಲ್ಲಿ 27,000 ಪ್ರಕರಣ ದಾಖಲು

ಸುಗಮವಾದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ದಂಡಗಳ್ನು ವಿಧಿಸುವ ಅವಕಾಶಗಳನ್ನು ತಪ್ಪಿಸಲು ನಿಗಮವು ಪ್ರಯಾಣಿಕರನ್ನು ವಿನಂತಿಸುತ್ತದೆ ಎಂದು ನಮ್ಮ ಮೆಟ್ರೋ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Namma Metro
ನಮ್ಮ ಮೆಟ್ರೋ
Updated on

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದವರಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (ಬಿಎಂಆರ್ ಸಿಎಲ್) ಶಾಕ್ ನೀಡಿದ್ದು, 6 ತಿಂಗಳಲ್ಲಿ 27,000 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.

ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಮೆಟ್ರೋದ ಭದ್ರತಾ ದಳವು ನಡೆಸಿದ ಭದ್ರತಾ ತಪಾಸಣೆಯ ವೇಳೆ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ ಸುಮಾರು 27,000 ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದೆ.

27.000 ಪ್ರಕರಣಗಳ ಆ ಪೈಕಿ ಮೊಬೈಲ್‌ನಲ್ಲಿ ಜೋರಾಗಿ ಸಂಗೀತ ಹಾಕಿದ್ದಕ್ಕಾಗಿ 11,922 ಪ್ರಕರಣಗಳು, ವಿಶೇಷ ಚೇತನರು, ಗರ್ಭಿಣಿಯರು, ಹಿರಿಯ ನಾಗರಿಕರಿಗೆ ಆಸನ ನೀಡದಿದ್ದಕ್ಕಾಗಿ 14,162 ಪ್ರಕರಣಗಳು, ಮೆಟ್ರೋದಲ್ಲಿ ಆಹಾರ ಸೇವಿಸಿದ್ದಕ್ಕಾಗಿ 554 ಹಾಗೂ ದೊಡ್ಡ ಗಾತ್ರದ ಲಗೇಜ್ ಸಾಗಿಸಿದ್ದಕ್ಕೆ 474 ಪ್ರಕರಣಗಳು ದಾಖಲಾಗಿವೆ.

ಈ ಕ್ರಮಗಳಿಗೆ ಯಾವುದೇ ದಂಡವನ್ನು ವಿಧಿಸಲಾಗಿಲ್ಲವಾದರೂ, ಅಂತಹ ನಡವಳಿಕೆಗಳನ್ನು ನಿರುತ್ಸಾಹಗೊಳಿಸಲು ಮತ್ತು ಸಾಮರಸ್ಯದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಬಲಪಡಿಸುವ ಉದ್ದೇಶದಿಂದ ಭದ್ರತಾ ದಳವು ಕಠಿಣ ಎಚ್ಚರಿಕೆಗಳನ್ನು ನೀಡಿದೆ. ಇದು ಪ್ರಯಾಣಿಕರಲ್ಲಿ ಹೆಚ್ಚಿನ ಅರಿವು ಮತ್ತು ಪರಿಗಣನೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ. ಸುಗಮವಾದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ದಂಡಗಳ್ನು ವಿಧಿಸುವ ಅವಕಾಶಗಳನ್ನು ತಪ್ಪಿಸಲು ನಿಗಮವು ಪ್ರಯಾಣಿಕರನ್ನು ವಿನಂತಿಸುತ್ತದೆ ಎಂದು ನಮ್ಮ ಮೆಟ್ರೋ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Namma Metro
ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಐಪಿಎಲ್‌ ಪಂದ್ಯಗಳಿಗೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com