ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸಿ: ಕೇಂದ್ರಕ್ಕೆ ಡಿಕೆಶಿ ಮನವಿ

"ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸಂಬಂಧಪಟ್ಟ ರಾಜ್ಯ ಸರ್ಕಾರಗಳೊಂದಿಗೆ ಶೀಘ್ರದಲ್ಲೇ ಸಭೆ ಕರೆಯಲು ಕೇಂದ್ರ ಒಪ್ಪಿಕೊಂಡಿದೆ" ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಗುರುವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಗುರುವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿತು.
Updated on

ನವದೆಹಲಿ: ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶವನ್ನು ಒಳಗೊಂಡ ದಶಕಗಳಷ್ಟು ಹಳೆಯದಾದ ಕೃಷ್ಣಾ ನೀರು ಹಂಚಿಕೆ ವಿವಾದದ ಕುರಿತು ಒಮ್ಮತ ಮೂಡಿಸಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಭೆ ಕರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.

"ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸಂಬಂಧಪಟ್ಟ ರಾಜ್ಯ ಸರ್ಕಾರಗಳೊಂದಿಗೆ ಶೀಘ್ರದಲ್ಲೇ ಸಭೆ ಕರೆಯಲು ಕೇಂದ್ರ ಒಪ್ಪಿಕೊಂಡಿದೆ" ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಗುರುವಾರ ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ಪಡೆಯಲು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿತು.

ಇಂದು ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಎಂ, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವರಾದ ಸಿ‌.ಆರ್ ಪಾಟೀಲ್ ಅವರನ್ನು, ರಾಜ್ಯಖಾತೆ ಸಚಿವರಾದ ಸೋಮಣ್ಣ ಅವರ ಜೊತೆ ಭೇಟಿ ಮಾಡಲಾಗಿತ್ತು. ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಮತ್ತು ನಮಗೆ ಎಷ್ಟು ನೀರು ಸಿಗಬೇಕು ಹಾಗೂ ಅಣೆಕಟ್ಟು ಎಷ್ಟು ಎತ್ತರ ಮಾಡಬೇಕು ಎಂದು ಹಿಂದೆಯೇ ತೀರ್ಮಾನವಾಗಿದೆ. 524 ಅಡಿ ಎತ್ತರಕ್ಕೆ ಎಷ್ಟು ಭೂಮಿ ಬೇಕಾಬಹುದು ಎಂದು ಅಂದಾಜಿಸಿ ಭೂಸ್ವಾಧೀನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕೆಲಸವನ್ನು ಬೇಗ ಮುಗಿಸುವ ಬದ್ಧತೆ ನಮ್ಮ ಸರ್ಕಾರಕ್ಕಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಬಗ್ಗೆಯೂ ಮನವಿ ಮಾಡಿದ್ದೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಗುರುವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿತು.
ಆಕ್ರಮಣಕಾರಿಯಾಗಿ ಧ್ವನಿ ಎತ್ತುವ ಉತ್ತಮ ವಾಗ್ಮಿಗಳನ್ನು MLC ಗಳಾಗಿ ಆಯ್ಕೆ: ಡಿಕೆಶಿ

ಇನ್ನು ಮೇಕೆದಾಟು ಯೋಜನೆಯ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ವಿವರವಾದ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ಜಲ ಆಯೋಗದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದರು.

ಮೇಕೆದಾಟು ಯೋಜನೆಗೆ ವಿರೋಧಿಸುತ್ತಿರುವ ತಮಿಳುನಾಡಿನ ಆಡಳಿತರೂಢ ಹಾಗೂ ಕಾಂಗ್ರೆಸ್ ಮಿತ್ರ ಪಕ್ಷ ಡಿಎಂಕೆ ಬಗ್ಗೆ ಕೇಳಿದಾಗ, "ಅದು ರಾಜಕೀಯ ಮೈತ್ರಿ, ಇದರಲ್ಲಿ ಯಾವುದೇ ಮೈತ್ರಿ ಇಲ್ಲ" ಎಂದರು.

ಬೆಂಗಳೂರಿನ ಹೆಚ್ಚುತ್ತಿರುವ ನೀರಿನ ಬೇಡಿಕೆಯನ್ನು ಪೂರೈಸುವ ಜೊತೆಗೆ ತಮಿಳುನಾಡಿಗೆ ನಿಯಂತ್ರಿತ ನೀರಿನ ಬಿಡುಗಡೆಗೆ ಅನುಕೂಲವಾಗುವಂತೆ ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೇಕೆದಾಟು ಯೋಜನೆಯ ಮಹತ್ವವನ್ನು ಅವರು ಒತ್ತಿ ಹೇಳಿದರು.

ಮೇಕೆದಾಟು ವಿಚಾರದಲ್ಲಿ 15 ದಿನಗಳಲ್ಲಿ ಸುಪ್ರೀಂ ‌ಕೋರ್ಟ್ ಕರ್ನಾಟಕದ‌ ವಾದ ಆಲಿಸುವುದಾಗಿ ಹೇಳಿತ್ತು. ಆದರೆ ದಿನಾಂಕ ನಿಗದಿ ಮಾಡಿಲ್ಲ. ತಮಿಳುನಾಡಿನವರು ರಾಜಕೀಯವಾಗಿ ಸಹಕಾರ ನೀಡುವುದಿಲ್ಲ‌‌ ಎನ್ನುವುದು ನಮಗೆ ಅರಿವಿದೆ. ಅವರು ಸಣ್ಣಪುಟ್ಟ ಅಣೆಕಟ್ಟುಗಳನ್ನು ಅವರ ವಲಯದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ನಾವು ತೊಂದರೆ ಕೊಡಲು ಹೋಗುವುದಿಲ್ಲ. ಈ ವಿಚಾರವನ್ನೂ ಸಚಿವರ ಗಮನಕ್ಕೆ ತರಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಿಯೋಗ ಗುರುವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿ ಮಾಡಿತು.
ಮೇಕೆದಾಟು-ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ CM ಸಿದ್ದರಾಮಯ್ಯ, DCM ಶಿವಕುಮಾರ್ ಮನವಿ!

ಪಿಎಂಕೆಎಸ್‌ವೈ-ಎಐಬಿಪಿ ಯೋಜನೆಯಡಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂಪಾಯಿ ನೀಡುವುದಾಗಿ ಹೇಳಿತ್ತು. ಆದರೆ ಇದುವರೆ ಆ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಈ ಹಣವನ್ನು ಶೀಘ್ರ ಬಿಡುಗಡೆ ಮಾಡುವಂತೆ ಉಪಮುಖ್ಯಮಂತ್ರಿಗಳು ಕೇಂದ್ರವನ್ನು ಒತ್ತಾಯಿಸಿದರು.

ಕಳಸಾ ಬಂಡೂರಿ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಗದಿರುವ ಬಗ್ಗೆ ಗಮನಕ್ಕೆ ತರಲಾಗಿದೆ. ಈಗಾಗಲೇ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಈ ಹಿಂದೆ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಅರಣ್ಯ ಸಚಿವರನ್ನೂ ಸಹ ಭೇಟಿ ಮಾಡಲಾಗಿತ್ತು. ಎತ್ತಿನಹೊಳೆ ಕಾಮಗಾರಿ ಕುಡಿಯುವ ನೀರಿನ ಯೋಜನೆಯಾದ ಕಾರಣ ಒಂದಷ್ಟು ಅನುದಾನ ನೀಡಬೇಕು ಎಂದು ಮನವಿ ಮಾಡಲಾಗಿದೆ. ಜೊತೆಗೆ ಅರಣ್ಯ ಭೂಮಿ ಬಳಕೆ, ಬದಲಿ ಭೂಮಿ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರ ಡಿಪಿಆರ್ ಅನ್ನು ನೋಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com