ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ: ದೂರು ದಾಖಲು

ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಅನ್ವರ್ ಮಾಣಿಪ್ಪಾಡಿ ಅವರು ಸದ್ಯ ಮಂಗಳೂರಿನಲ್ಲಿರುವ ನಿವಾಸದಲ್ಲಿ ವಾಸವಾಗಿದ್ದಾರೆ.
anwar manippady
ಅನ್ವರ್ ಮಾಣಿಪ್ಪಾಡಿ
Updated on

ಬೆಂಗಳೂರು: ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬಂದಿವೆ.

ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಬೆದರಿಕೆ ಕರೆ ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಅನ್ವರ್ ಮಾಣಿಪ್ಪಾಡಿ ಅವರು ಸದ್ಯ ಮಂಗಳೂರಿನಲ್ಲಿರುವ ನಿವಾಸದಲ್ಲಿ ವಾಸವಾಗಿದ್ದಾರೆ. ದೂರು ಆಧರಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯ ಮೇಲೆ ಲೋಕಸಭೆಯಲ್ಲಿ ಚರ್ಚೆ ಮಾಡುವ ಸಂದರ್ಭ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ವಿಚಾರ ಕೂಡ ಪ್ರಸ್ತಾಪ ಮಾಡಿದ್ದರು. ಅನ್ವರ್ ಮಾಣಿಪ್ಪಾಡಿ ವರದಿ ಉಲ್ಲೇಖಿಸಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬೆದರಿಕೆ ಕರೆ ಬಂದಿರುವುದು ಚರ್ಚೆಗೆ ಕಾರಣವಾಗಿದೆ.

ಇಂಟರ್ನೆಟ್ ಕರೆ ಮೂಲಕ ನನಗೆ ನಿರಂತರ ಬೆದರಿಕೆ ಬರುತ್ತಾ ಇದೆ. ಹಿಂದಿ, ಮರಾಠಿ, ಇಂಗ್ಲೀಷ್ ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆಗಳು ಬರುತ್ತಾ ಇವೆ. ಇಂಗ್ಲಿಷ್​ನಲ್ಲಿ ಕರೆ ಮಾಡಿದ ವ್ಯಕ್ತಿ ನೀವು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ನಿನ್ನ ಸಮುದಾಯ ನಿನ್ನನ್ನು ಬಿಡಲ್ಲ ಎಂದೆಲ್ಲಾ ಹೇಳಿದ್ದಾನೆ. ಆದರೆ ನನ್ನ ಸಮುದಾಯದ ಬಗ್ಗೆ ನನಗೆ ಖುಷಿ ಇದೆ. ಸದ್ಯ ನಾನು ಮಂಗಳೂರು ಕಮಿಷನರ್ ಅನುಪಮ್ ಅಗರವಾಲ್​ಗೆ ಮಾಹಿತಿ ಕೊಟ್ಟಿದ್ದೇನೆ. ನಾನು ಈ ಹಿಂದೆಯೂ ಭದ್ರತೆ ಕೊಟ್ಟಾಗ ವಾಪಾಸ್ ಕಳುಹಿಸಿದ್ದೆ. ಈಗ ತಿದ್ದುಪಡಿ ಮಸೂದೆ ಜಾರಿ ಬಳಿಕ ಮತ್ತೆ ಒಂದಷ್ಟು ಕರೆಗಳು ಬರುತ್ತಿವೆ, ಅದು ಸಾಮಾನ್ಯ ಎಂದಿದ್ದಾರೆ.

anwar manippady
Watch | ಅನುರಾಗ್ vs ಖರ್ಗೆ: ವಕ್ಫ್ ಅಕ್ರಮ ಆರೋಪ; ಸಾಬೀತುಪಡಿಸಿ ಅಥವಾ ರಾಜೀನಾಮೆ ನೀಡಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com