ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Reprresentational image
ಸಾಂದರ್ಭಿಕ ಚಿತ್ರ
Updated on

ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ.

ತಾಯಿ ವಿಜಯಲಕ್ಷ್ಮೀ(45), ಮಗಳು ಚೂಡಾಮಣಿ(23), ಪುತ್ರ ನರಸಿಂಹರಾಜು(14) ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರ ಭೇಟಿ ತನಿಖೆ ಕೈಗೊಂಡಿದ್ದಾರೆ.

Reprresentational image
ಮದುವೆಯಿಂದ ನನ್ನ ಸಂತೋಷ ಹಾಳು: ಪತ್ನಿಯ ಕಾಟ ತಡೆಯಲಾರದೇ Instagram live ನಲ್ಲಿ ವ್ಯಕ್ತಿ ಆತ್ಮಹತ್ಯೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com