ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ; ಭದ್ರಾ ಮೇಲ್ದಂಡೆ ಅನುದಾನ ವಿಚಾರ ಕೇಂದ್ರ ಸಂಪುಟದ ಮುಂದೆ: ಡಿ.ಕೆ ಶಿವಕುಮಾರ್

ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಬಿಡುಗಡೆ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ.
Dk shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು. ರೈತರಿಗೆ ಸಹಾಯವಾಗಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗಿಂತ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಬಿಡುಗಡೆ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ. ನಾವು ಭದ್ರಾ ಯೋಜನೆಗೆ ಎಷ್ಟು ಖರ್ಚು ಮಾಡಿದ್ದೇವೆ, ಕೇಂದ್ರ ಎಷ್ಟು ಕೊಡಬೇಕು ಎಂಬುದನ್ನೂ ತಿಳಿಸಿದ್ದೇವೆ. ದೆಹಲಿ ಭೇಟಿ ವೇಳೆ ಕೇಂದ್ರ ಜಲಶಕ್ತಿ ಸಚಿವರನ್ನು ನಾನು ಹಾಗೂ ಮುಖ್ಯಮಂತ್ರಿಯವರು ಭೇಟಿ ಮಾಡಿ ರಾಜ್ಯದ ನೀರಾವರಿ ಸಂಬಂಧಿತ ವಿಚಾರಗಳನ್ನು ಚರ್ಚೆ ಮಾಡಿದೆವು. ಮಹದಾಯಿ, ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ವಿಚಾರಗಳನ್ನು ಮನವರಿಕೆ ಮಾಡಿದ್ದೇವೆ. ನಮ್ಮ ಸಮಸ್ಯೆಗಳು ಅವರಿಗೆ ಅರ್ಥವಾಗಿದೆ. ಈ ವಿಚಾರವಾಗಿ ಒಬ್ಬೊಬ್ಬರನ್ನೇ ಕರೆಸಿ ಮಾತುಕಥೆ ನಡೆಸುವುದಾಗಿ ತಿಳಿಸಿದ್ದಾರೆ ಎಂದರು.

ಎತ್ತಿನಹೊಳೆಗೆ ಅನುಮತಿ ನೀಡಲೇಬೇಕು. ಇದರಲ್ಲಿ ಕೊಡಿಸುವುದೇನಿದೆ? ಇದು ಅವರ ಕರ್ತವ್ಯ. ಸ್ವಾಧೀನ ಪಡಿಸಿಕೊಂಡ ಭೂಮಿಗೆ ಬದಲಿ ಭೂಮಿ ನೀಡಿದ್ಧೇವೆ ಎಂದು ತಿಳಿಸಿದರು. ತಮಿಳುನಾಡಿನಿಂದ ಮೇಕೆದಾಟಿಗೆ ಮೊದಲು ಒಪ್ಪಿಗೆ ಪಡೆಯಿರಿ ನಾವು ನಂತರ ಕೊಡಿಸುತ್ತೇವೆ ಎನ್ನುವ ಬಿಜೆಪಿಯವರ ಹೇಳಿಕೆಯ ಬಗ್ಗೆ ಕೇಳಿದಾಗ, “ಅವರ ಸಲಹೆಯನ್ನು ನಾನು ಸ್ವೀಕರಿಸುತ್ತೇನೆ” ಎಂದು ಹೇಳಿದರು.

Dk shivakumar
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸಿ: ಕೇಂದ್ರಕ್ಕೆ ಡಿಕೆಶಿ ಮನವಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com