
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸುದ್ದಿಯಾಗುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಆರೋಪ, ಪ್ರತ್ಯಾರೋಪ, ಜಟಾಪಟಿಗೂ ಕಾರಣವಾಗುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಶಾಸಕ ಪೊನ್ನಣ್ಣ ಮತ್ತು ಮಂತರ್ ಗೌಡ ವಿರುದ್ದ ಎಫ್ ಐಆರ್ ಹಾಕುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಕುಶಾಲನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಅವರ ಡಿಮ್ಯಾಂಡ್ ಗೆಲ್ಲಾ ನಾವು ಉತ್ತರ ಕೊಡೋಕೆ ಆಗಲ್ಲ.
ಶಾಸಕರಾದ ಪೊನ್ನಣ್ಣ, ಮಂತರ್ ಗೌಡ ಅವರ ಹೆಸರನ್ನು ಎಫ್ ಐಆರ್ ನಲ್ಲಿ ಸೇರಿಸಬೇಕು ಎನ್ನುವ ಬಿಜೆಪಿ ನಾಯಕರ ಬೇಡಿಕೆ ಒಪ್ಪಲು ಆಗದು ಎಂದರು.
ವಿನಯ್ ಸೋಮಯ್ಯ ಅವರ ಸಾವಿನ ಸಂಬಂಧ ಎಫ್ಐರ್ ಆಗಿದೆ. ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ತನಿಖೆ ನಡೆಯುವಾಗ ನಾನು ಹೆಚ್ಚು ಮಾತಾಡಲ್ಲ . ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ದೂರಿದರು.
ಏನಿದು ಪ್ರಕರಣ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಶಾಸಕ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ವಿನಯ್ ಮೇಲೆ ಎಫ್ಐಆರ್ ದಾಖಲಾಗಿತ್ತು ಎನ್ನಲಾಗುತ್ತಿದೆ.
ಸೋಶಿಯಲ್ ಮೀಡಿಯಾದಲ್ಲಿ ವಿನಯ್ ಡೆತ್ ನೋಟ್ ಪೋಸ್ಟ್ ಮಾಡಿದ್ದರು. ಈ ಡೆತ್ ನೋಟ್ ಮೇಲೆಯೇ ಪೊಲೀಸರಿಗೆ ಅನುಮಾನ ಶುರುವಾಗಿದೆ. ವಿನಯ್ ಟೈಪ್ ಮಾಡಿದ್ದ ಡೆತ್ ನೋಟ್ ಪೊಲೀಸರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಮೊಬೈಲ್ ವಾಟ್ಸಪ್ ನಲ್ಲಿ ವಿನಯ್ ಡೆತ್ ನೋಟ್ ಬರೆದಿದ್ರು ಎನ್ನಲಾಗ್ತಿದೆ. ಡಿಜಿಟಲ್ ರೂಪದಲ್ಲಿ ಬರೆಯಲಾದ ಈ ಡೆತ್ ನೋಟ್ ಅನ್ನು ಯಾವ ರೀತಿ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಪೊಲೀಸರು ಚಿಂತನೆ ನಡೆಸಿದ್ದಾರೆ.
Advertisement