
ದಾವಣಗೆರೆ: ಇಬ್ಬರು ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು ಅಷ್ಟಕ್ಕೆ ಸುಮ್ಮನಾಗದೇ ಕಿರಾತಕರು ಬಾಲಕರ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ನಲ್ಲೂರಿನ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್ 4ರಂದೇ ಈ ಘಟನೆ ನಡೆದಿತ್ತು. ಈ ಸಂಬಂಧ ವಿಡಿಯೋ ವೈರಲ್ ಆದ ಬಳಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳತನದ ಆರೋಪ ಮಾಡಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿದ್ದ ಯುವಕರು ಅವರ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು 9 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಸುಭಾಷ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಕ್ಕಿ-ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಸುಭಾಷ್, ಲಕ್ಕಿ , ದರ್ಶನ್ , ಪರಶು , ಶಿವದರ್ಶನ್ ಸೇರಿದಂತೆ ಹತ್ತು ಯುವಕರು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement