ರಾಜ್ಯದ ಬೀದಿ ವ್ಯಾಪಾರಿಗಳ ಕುರಿತು ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ರಾಹುಲ್ ಗಾಂಧಿ ಕಳವಳ!

ಬೀದಿ ಬದಿ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಅವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರವು ವಿದ್ಯುತ್ ಚಾಲಿತ ವಾಹನಗಳನ್ನು ಒದಗಿಸುವ ಪ್ರಕ್ರಿಯೆಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಹುಲ್ ಗಾಂಧಿ-ಸಿದ್ದರಾಮಯ್ಯ
ರಾಹುಲ್ ಗಾಂಧಿ-ಸಿದ್ದರಾಮಯ್ಯ
Updated on

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಅವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರವು ವಿದ್ಯುತ್ ಚಾಲಿತ ವಾಹನಗಳನ್ನು ಒದಗಿಸುವ ಪ್ರಕ್ರಿಯೆಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕದಲ್ಲಿ ಬೀದಿ ವ್ಯಾಪಾರಿಗಳ ಸ್ಥಿತಿಯ ಬಗ್ಗೆ ರಾಹುಲ್ ಗಾಂಧಿ ಮುಖ್ಯಮಂತ್ರಿಗೆ ಬರೆದ ಪತ್ರದ ಮೂಲಕ ಕಳವಳ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ, ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ 27,655 ಮಾರಾಟಗಾರರನ್ನು ನೋಂದಾಯಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಬೀದಿ ವ್ಯಾಪಾರಿಗಳ ಒಟ್ಟಾರೆ ಯೋಗಕ್ಷೇಮಕ್ಕೆ ಬದ್ಧವಾಗಿದೆ ಮತ್ತು ಅವರ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

2013 ಮತ್ತು 2018ರ ನಡುವೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೀದಿ ವ್ಯಾಪಾರಿಗಳ ಪರವಾಗಿ ನಿಯಮಗಳನ್ನು ರೂಪಿಸಿದ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂದು ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ತಿಳಿಸಿದರು. ಕರ್ನಾಟಕದ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮವಾಗಿ 2017 ಮತ್ತು 2019ರಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಮತ್ತು ವಿವಿಧ ಪಟ್ಟಣ ಮಾರಾಟ ಸಮಿತಿಗಳಿಗೆ ಚುನಾವಣೆಗಳನ್ನು ಮೊದಲ ಬಾರಿಗೆ ನಡೆಸಲಾಗಿತ್ತು ಎಂದು ಅವರು ಎತ್ತಿ ತೋರಿಸಿದರು.

2022ರಲ್ಲಿ ಇದೇ ಪ್ರಕ್ರಿಯೆಯನ್ನು ಪುನರಾವರ್ತಿಸಬೇಕಾಗಿತ್ತು. ಆದರೆ ದುರದೃಷ್ಟವಶಾತ್ ಅದನ್ನು ಕೈಗೊಳ್ಳಲಾಗಲಿಲ್ಲ. ಆದರೆ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿದ ತಕ್ಷಣ, ಬೀದಿ ವ್ಯಾಪಾರಿಗಳ ಕಾಯ್ದೆ, 2014ರ ಪ್ರಕಾರ ಬೀದಿ ವ್ಯಾಪಾರಿಗಳ ಹೊಸ ಸಮೀಕ್ಷೆಯನ್ನು ನಡೆಸಲಾಗಿದೆ. ಪಟ್ಟಣ ಮಾರಾಟ ಸಮಿತಿಗಳಿಗೆ ಚುನಾವಣೆಗಳು ಏಪ್ರಿಲ್ 2025 ರಲ್ಲಿ ಪೂರ್ಣಗೊಳ್ಳಲಿವೆ. ಒಟ್ಟು 189 ವಿವಿಧ ರೀತಿಯ ಮಾರಾಟ ವಲಯಗಳನ್ನು ಗುರುತಿಸಲಾಗಿದೆ. ಅದರೊಳಗೆ 10,142 ಮಾರಾಟ ಸ್ಥಳಗಳನ್ನು ಮೀಸಲಿಡಲಾಗಿದೆ ಎಂದರು.

ರಾಹುಲ್ ಗಾಂಧಿ-ಸಿದ್ದರಾಮಯ್ಯ
ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ಮೇ 1 ರಂದು ಸೇವೆ ಖಾಯಂ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೀದಿ ವ್ಯಾಪಾರಿಗಳಿಗಾಗಿ ರಾಜ್ಯವು ವಿವಿಧ ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. ಅವರ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೌಲಭ್ಯಗಳು, ವಸತಿ ಮತ್ತು ಅವರ ಉದ್ಯೋಗಾವಕಾಶಗಳನ್ನು ಸುಧಾರಿಸಲು ಕೌಶಲ್ಯ ತರಬೇತಿಯಂತಹ ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದೆ. ಹೆಚ್ಚುವರಿಯಾಗಿ, ಅವರ ಚಲನಶೀಲತೆಯನ್ನು ಹೆಚ್ಚಿಸಲು ಮತ್ತು ಉತ್ತಮ ವ್ಯಾಪಾರ ಅವಕಾಶಗಳನ್ನು ಸೃಷ್ಟಿಸಲು ನಾವು ಅವರಿಗೆ ವಿದ್ಯುತ್ ಮಾರಾಟ ವಾಹನಗಳನ್ನು ನೀಡುವ ಪ್ರಕ್ರಿಯೆಯಲ್ಲಿದ್ದೇವೆ. 2024–-25 ರಲ್ಲಿ, ವಿವಿಧ ರೀತಿಯ ಮಾರಾಟ ವಾಹನಗಳನ್ನು ಪಡೆಯಲು 3,778 ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com