ಕಟ್ಟಡ ಕಾರ್ಮಿಕರನ ಮೃತದೇಹ ಪತ್ತೆ: ಕೊಲೆ ಶಂಕೆ

ಭಾನುವಾರ ಬೆಳಗ್ಗೆ ದಾರಿಹೋಕರು ಕರಿಹೋಬನಹಳ್ಳಿಯ ಪೊದೆಯಲ್ಲಿ ಮೃತದೇಹ ಕಂಡು 112 ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಬಿಹಾರ ಮೂಲದ ಕಾರ್ಮಿಕನನ್ನು ಬರ್ಬರವಾಗಿ ಕೊಲೆಗೈದು ಬಳಿಕ ಮೃತದೇಹವನ್ನು ನಿರ್ಜನ ಪ್ರದೇಶದ ಪೊದೆಯೊಂದಕ್ಕೆ ಎಸೆದಿರುವ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಬಿಹಾರ ಮೂಲದ ವಿಕಾಸ್ ಕುಮಾರ್ (25) ಎಂದು ಗುರುತಿಸಲಾಗಿದೆ. ಈತ ಕಟ್ಟಡ ಕಾರ್ಮಿಕನಾಗಿದ್ದು, ಕಾಜೋ ಹಳ್ಳಿ ಯ ನಿರ್ಮಾಣ ಹಂತದ ಕಟ್ಟಡದಲ್ಲಿ ನೆಲೆ ಸಿದ್ದ. ದುಷ್ಕರ್ಮಿಗಳು ಆತನ್ನು ಕೊಲೆ ಗೈದು ಬಳಿಕ ಪಂಚಮುಖಿ ಬಡಾವಣೆ ಯ ಕರಿ ಹೋಬ ನಹಳ್ಳಿ ನಿರ್ಜನಪ್ರದೇಶದ ಪೊದೆ ಯೊಂದರಲ್ಲಿ ಎಸೆದು ಪರಾರಿಯಾಗಿದ್ದಾರೆ.

ಭಾನುವಾರ ಬೆಳಗ್ಗೆ ದಾರಿಹೋಕರು ಕರಿಹೋಬನಹಳ್ಳಿಯ ಪೊದೆಯಲ್ಲಿ ಮೃತದೇಹ ಕಂಡು 112 ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಮೇರೆಗೆ ಪೀಣ್ಯ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ.

ಮೃತ ವಿಕಾಸ್ ಮೃತದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ದುಷ್ಕರ್ಮಿಗಳು ಬೇರೆ ಸ್ಥಳದಲ್ಲಿ ಕೊಲೆಗೈದು ಬಳಿಕ ಮೃತದೇಹವನ್ನು ಪೊದೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಇದೀಗ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನೇ ಸುಪಾರಿ ಕೊಟ್ಟು ಹತ್ಯೆ; ಕೊಲೆ ದೃಶ್ಯ ನೋಡಿ ಪತ್ನಿ ಸಂಭ್ರಮ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com