ನಕಲಿ ಗೋಲ್ಡ್ ಹಗರಣ: ಡಿಸಿಸಿ ಬ್ಯಾಂಕ್ ಮಾಜಿ ಮ್ಯಾನೇಜರ್ ಸೇರಿ ಮೂವರ ಮೇಲೆ ED ದಾಳಿ

ಬ್ಯಾಂಕ್​ನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ. 2 ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.
Enforcement directorate
ಜಾರಿ ನಿರ್ದೇಶನಾಲಯ
Updated on

ಶಿವಮೊಗ್ಗ: ಶೋಭಾ ಎಂಬುವವರು ಡಿಸಿಸಿ ಬ್ಯಾಂಕ್ ಮ್ಯಾನೇಜರ್​ ಆಗಿದ್ದ ಸಂದರ್ಭದಲ್ಲಿ ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ 8ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಇಂದು ದಾಳಿ ನಡೆದಿದೆ.

2014ರ ಜೂನ್ ನಲ್ಲಿ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ನಕಲಿ ಗೋಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಅಂದು ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಅವರ ನಿವಾಸ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬ್ಯಾಂಕ್​ನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ. 2 ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಕಾಮಾಕ್ಷಿ ಬೀದಿಯ ಶಿವಕುಮಾರ್ ಎಂಬುವರ ಮನೆ ಮೇಲೂ ಇಡಿ ತಂಡದ ಪ್ರತ್ಯೇಕ ದಾಳಿ ನಡೆಸಿದೆ. ಏಕಕಾಲಕ್ಕೆ ಎರಡು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಿಗೆ ಇಡಿ ಶಾಕ್

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್​ ಗೌಡಗೂ ಇಡಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳಿಂದ ಮಂಜುನಾಥ್ ಗೌಡ ವಿಚಾರಣೆ ನಡೆಸಲಾಗುತ್ತಿದೆ. ಅಪೆಕ್ಸ್ ಬ್ಯಾಂಕ್​ನ ಗೆಸ್ಟ್ ಹೌಸ್​ನಲ್ಲಿ ಮಂಜುನಾಥ್ ಗೌಡ ವಿಚಾರಣೆ ಮಾಡುತ್ತಿದ್ದಾರೆ. 10ಕ್ಕೂ ಹೆಚ್ಚು ಇಡಿ ಅಧಿಕಾರಿಗಳಿಂದ ಮಂಜುನಾಥ್​ಗೌಡ ವಿಚಾರಣೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com