PUC ಆರ್ಟ್ಸ್ ವಿಭಾಗದಲ್ಲಿ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಲಾರಿ ಚಾಲಕನ ಪುತ್ರಿ!

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ.
ಸಂಜನಾಬಾಯಿ-ನಿರ್ಮಲಾ
ಸಂಜನಾಬಾಯಿ-ನಿರ್ಮಲಾ
Updated on

ವಿಜಯನಗರ: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್‌ನಲ್ಲಿ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ನಿರ್ಮಲಾ ಕಲಾ ವಿಭಾಗದಲ್ಲಿ 600ಕ್ಕೆ 596 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.‌

ಸಂಜನಾಬಾಯಿ-ನಿರ್ಮಲಾ
Karnataka PUC 2 Result 2025: ದ್ವಿತೀಯ ಪಿಯುಸಿ ರಿಸಲ್ಟ್; ಶೇ.73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಫಲಿತಾಂಶದಲ್ಲಿ ಶೇ.7.7ರಷ್ಟು ಕುಸಿತ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com