ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಸಂಭಾವ್ಯ ಸ್ಥಳವಾಗಿ 'ಶಿರಾ'; ಶಾಸಕ ಅಭಿಯಾನ!

ಬೆಂಗಳೂರಿನಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ತುಮಕೂರು ಜಿಲ್ಲೆಯ ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಬಲ ಹೆಚ್ಚುತ್ತಿದ್ದು ಕೇಂದ್ರ ಸಚಿವ ವಿ. ಸೋಮಣ್ಣ ಈ ಬೇಡಿಕೆಗೆ ಬೆಂಬಲ ಸೂಚಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು/ತುಮಕೂರು: ಬೆಂಗಳೂರಿನ ಪ್ರಸ್ತಾವಿತ ಎರಡನೇ ವಿಮಾನ ನಿಲ್ದಾಣಕ್ಕಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಮೂರು ಶಾರ್ಟ್‌ಲಿಸ್ಟ್ ಮಾಡಿದ ಸ್ಥಳಗಳನ್ನು ಪರಿಶೀಲಿಸುತ್ತಿದ್ದರೂ, ಬೆಂಗಳೂರಿನಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ತುಮಕೂರು ಜಿಲ್ಲೆಯ ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಬಲ ಹೆಚ್ಚುತ್ತಿದ್ದು ಕೇಂದ್ರ ಸಚಿವ ವಿ. ಸೋಮಣ್ಣ ಈ ಬೇಡಿಕೆಗೆ ಬೆಂಬಲ ಸೂಚಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಶಾಸಕ ಟಿ.ಬಿ ಜಯಚಂದ್ರ ಈ ಅಭಿಯಾನದ ನೇತೃತ್ವ ವಹಿಸಿದ್ದಾರೆ. ಪಕ್ಷಗಳನ್ನು ಮೀರಿ ಹಲವಾರು ಶಾಸಕರು ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಪ್ರಸ್ತಾವಿತ ವಿಮಾನ ನಿಲ್ದಾಣದ ಸ್ಥಳವಾಗಿ ಶಿರಾವನ್ನು ಆಯ್ಕೆ ಮಾಡುವಂತೆ ಒತ್ತಾಯಿಸಿದ್ದಾರೆ. ನಗರದ ಎರಡನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಮೂರು ಸಂಭಾವ್ಯ ಸ್ಥಳಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಎರಡು ಹಾರೋಹಳ್ಳಿ ಬಳಿಯ ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲದ ಕುಣಿಗಲ್ ರಸ್ತೆಯಲ್ಲಿ ಒಂದು ಸ್ಥಳವನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ಕರ್ನಾಟಕದಲ್ಲಿರುವ ಎಎಐ ತಂಡ ಈ ಸ್ಥಳಗಳನ್ನು ಪರಿಶೀಲಿಸುತ್ತಿದೆ.

ಜಯಚಂದ್ರ ಅವರು ದೆಹಲಿಗೆ ಭೇಟಿ ನೀಡಿದ್ದಾಗ ಸುಮಾರು 34 ಶಾಸಕರು ಸಹಿ ಮಾಡಿದ ಅರ್ಜಿಯನ್ನು ನನಗೆ ನೀಡಿದರು. ನಾವು ಅದನ್ನು ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಅವರಿಗೆ ಸಲ್ಲಿಸಿದ್ದೇವೆ. ರಾಜ್ಯ ಸರ್ಕಾರವು ಈ ಹಿಂದೆ ಮೂರು ಸ್ಥಳಗಳನ್ನು ಶಾರ್ಟ್‌ಲಿಸ್ಟ್ ಮಾಡಿತ್ತು ಎಎಐ ಅಧಿಕಾರಿಗಳು ಈಗ ಸಾಧಕ-ಬಾಧಕಗಳನ್ನು ನಿರ್ಣಯಿಸಲು ಅವುಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಬುಧವಾರ ಸೋಮಣ್ಣ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತುಮಕೂರಿನ ಸಂಸದರು, ಶಿರಾ ಬಳಿಯ ಬುಕ್ಕಪಟ್ಣದಲ್ಲಿ ಪ್ರಸ್ತಾವಿತ ವಿಮಾನ ನಿಲ್ದಾಣವು ಯಾವುದೇ ಅಡೆತಡೆಗಳು ಅಥವಾ ಬೆಟ್ಟಗಳಿಲ್ಲದ ಸುಮಾರು 3,500 ರಿಂದ 4,000 ಎಕರೆಗಳಷ್ಟು ದೊಡ್ಡ ಭೂಪ್ರದೇಶದ ಪ್ರಯೋಜನವನ್ನು ಹೊಂದಿದೆ ಎಂದು ಹೇಳಿದರು.

ಸಂಗ್ರಹ ಚಿತ್ರ
ಬೆಂಗಳೂರಿನ 2ನೇ ವಿಮಾನ‌ ನಿಲ್ದಾಣ: ಬಿಡದಿ ಔಟ್; ಈ ಎರಡು ಜಾಗ ಫಿಕ್ಸ್!

ಹಿರಿಯ ರಾಜಕಾರಣಿ ಜಯಚಂದ್ರ ಈ ಸ್ಥಳವನ್ನು ಪ್ರಸ್ತಾಪಿಸಿದ್ದಾರೆ. ನಾನು ಅದನ್ನು ಬೆಂಬಲಿಸುತ್ತೇನೆ. ನಾವು ಒತ್ತಡ ಹೇರುತ್ತೇನೆ. ನಮ್ಮ ಪಕ್ಷದ ಅನೇಕ ನಾಯಕರು ಸಹ ಇದನ್ನು ಬೆಂಬಲಿಸುತ್ತಾರೆ. ಅಂತಿಮವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲಾ ಅಂಶಗಳನ್ನು ಅಳೆದು ನೋಡುವ ನಂತರ ನಿರ್ಧರಿಸುತ್ತವೆ ಎಂದು ಸೋಮಣ್ಣ ಹೇಳಿದರು.

ಎಎಐ ತಂಡವು ಮೂರು ಶಾರ್ಟ್‌ಲಿಸ್ಟ್ ಮಾಡಿದ ಸ್ಥಳಗಳನ್ನು ಪರಿಶೀಲಿಸುತ್ತಿದ್ದರೂ, ಈ ಪ್ರಕ್ರಿಯೆಯು ಅಂತಿಮವಲ್ಲ. ಅವರು ಶಿರಾಗೆ ಭೇಟಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ನಾವು ಒತ್ತಾಯಿಸುತ್ತೇವೆ ಎಂದು ಸೋಮಣ್ಣ ಹೇಳಿದರು. ಶಿರಾ ರಾಷ್ಟ್ರೀಯ ಹೆದ್ದಾರಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದೆ ಮತ್ತು ಎಚ್‌ಎಎಲ್ ಸೌಲಭ್ಯಕ್ಕೆ ಹತ್ತಿರದಲ್ಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com