ಬೇಸಿಗೆ ರಜೆ: ಬೆಂಗಳೂರಿಗರೇ, ಮನೆಗೆ ಬೀಗ ಹಾಕಿ ಊರುಗಳಿಗೆ, ಪ್ರವಾಸ ಹೋಗುವ ಮುನ್ನ ಇರಲಿ ಎಚ್ಚರ!

ದೀರ್ಘ ಅವಧಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಮನೆಯಲ್ಲಿ ಬೆಳೆಬಾಳುವ ವಸ್ತುಗಳನ್ನು ಇಡಬೇಡಿ. ಅವುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ ಎಂದು ಅವರ ಸಲಹೆ ನೀಡಿದ್ದಾರೆ.
B Dayanand
ಬಿ ದಯಾನಂದ್
Updated on

ಬೆಂಗಳೂರು: ಏಪ್ರಿಲ್ ತಿಂಗಳು ಬಂತೆಂದರೆ ಶಾಲಾ-ಕಾಲೇಜುಗಳಿಗೆ ರಜೆಯ ಸಮಯ. ಬೇಸಿಗೆ ರಜೆ ಬಂತೆಂದರೆ ದೂರದ ಊರುಗಳಿಗೆ, ಪ್ರವಾಸಗಳಿಗೆ ಹೋಗುವವರ ಸಂಖ್ಯೆ ಹೆಚ್ಚು. ನಗರವಾಸಿಗಳು ಮನೆಗಳಿಗೆ ಬೀಗ ಹಾಕಿ ವಾರಗಟ್ಟಲೆ ಹೊರಗೆ ಹೋಗುವುದುಂಟು.

ಇಂತಹ ಸಂದರ್ಭದಲ್ಲಿ ಮನೆಯ ಭದ್ರತೆ ಬಗ್ಗೆ ಜಾಗರೂಕರಾಗಿರಬೇಕು, ನಗರಗಳಲ್ಲಿ ಕಳ್ಳಕಾಕರ ಭೀತಿ ಹೆಚ್ಚು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಎಚ್ಚರಿಕೆಗಳನ್ನು ನೀಡಿದ್ದಾರೆ. ನಗರದಲ್ಲಿ ಇತ್ತೀಚೆಗೆ ನಡೆದ ಅಪರಾಧ ಕೃತ್ಯಗಳ ಮತ್ತು ಕಳ್ಳತನ ಪ್ರಕರಣಗಳ ಬಗ್ಗೆ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದ ಅವರು, ಸಾರ್ವಜನಿಕರು ಏನೇನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಯನ್ನೂ ನೀಡಿದ್ದಾರೆ. ವಿಶೇಷವಾಗಿ, ಮನೆಗೆ ಬೇಗ ಹಾಕಿ ಊರಿಗೆ ಅಥವಾ ಪ್ರವಾಸಕ್ಕೆ ತೆರಳುವ ಮುನ್ನ ಬೆಂಗಳೂರು ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ದೀರ್ಘ ಅವಧಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಮನೆಯಲ್ಲಿ ಬೆಳೆಬಾಳುವ ವಸ್ತುಗಳನ್ನು ಇಡಬೇಡಿ. ಅವುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ ಎಂದು ಅವರ ಸಲಹೆ ನೀಡಿದ್ದಾರೆ.

ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ

ಮನೆಗೆ ಗುಣಮಟ್ಟದ ಬೀಗ ಅಳವಡಿಸಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಿ. ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಎಲ್ಲೋ ಇಟ್ಟು ಹೋಗುವ ಅಭ್ಯಾಸ ಮಾಡಬೇಡಿ. ಒಂದಕ್ಕಿಂತ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ತೆರಳಿ. ಇಂಥ ಸಂದರ್ಭದಲ್ಲಿ ಆ ಪ್ರದೇಶದಲ್ಲಿ ಗಸ್ತು ನಡೆಸುವುದು ಪೊಲೀಸರಿಗೂ ಸುಲಭವಾಗುತ್ತದೆ ಎಂದು ಹೇಳಿದ್ದಾರೆ.

ಮನೆ ಕೆಲಸದವರ ನೇಮಕದ ವೇಳೆ ಇರಲಿ ಎಚ್ಚರ

ಕಷ್ಟಪಟ್ಟು ಸಂಪಾದಿಸಿದ ಹಣ, ಚಿನ್ನವನ್ನು ಒಂದು ಸಣ್ಣ ಅಜಾಗರೂಕತೆಯಿಂದ ಕಳೆದುಕೊಳ್ಳಬೇಡಿ. ಕಳ್ಳರು ಕೇವಲ ಹೊರಗಿನಿಂದ ಬರುವವರಷ್ಟೇ ಅಲ್ಲ, ಮನೆಯಲ್ಲಿಯೂ ಇರಬಹುದು. ಹೀಗಾಗಿ ಮನೆ ಕೆಲಸದವರನ್ನು ನೇಮಿಸಿಕೊಳ್ಳುವ ಮುನ್ನ ಅವರ ಪೂರ್ವಾಪರವನ್ನು ಸರಿಯಾಗಿ ತಿಳಿದುಕೊಳ್ಳಿ. ಮನೆಯಲ್ಲಿ ಎಲ್ಲೆಂದರಲ್ಲಿ ಕೆಲಸದವರನ್ನು ಓಡಾಡಲು ಬಿಡಬೇಡಿ. ಬೆಲೆಬಾಳುವ ವಸ್ತುಗಳನ್ನು ಅವರಿಗೆ ಕಾಣುವಂತೆ ಇಡುವುದು, ಪ್ರದರ್ಶಿಸುವುದು ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com