ಚೆಕ್‌ಬೌನ್ಸ್‌ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರೂ ದಂಡ ವಿಧಿಸಿದ ಕೋರ್ಟ್

ಬಿ.ನಾಗೇಂದ್ರ, ಬಿ.ಸಿ.ಇನ್ಫ್ರಾಸ್ಟ್ರಕ್ಚರ್, ಅನಿಲ್ ರಾಜಶೇಖರ್ ಚಂಡೂರು ಭಾಸ್ಕರ್ ಅವರಿಗೆ ಕೋರ್ಟ್ ದಂಡ ವಿಧಿಸಿದ್ದು, ಒಂದು ವೇಳೆ ಈ ದಂಡ ಪಾವತಿಸದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದೆ.
ಬಿ. ನಾಗೇಂದ್ರ
ಬಿ. ನಾಗೇಂದ್ರ
Updated on

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ 1.25 ಕೋಟಿ ರೂ. ದಂಡ ವಿಧಿಸಿದೆ.

ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್‌ ದಾಖಲಿಸಿದ್ದ ಚೆಕ್​​ ಬೌನ್ಸ್​ ಪ್ರಕರಣದ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಅವರು, ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಬಿ.ನಾಗೇಂದ್ರ, ಬಿ.ಸಿ.ಇನ್ಫ್ರಾಸ್ಟ್ರಕ್ಚರ್, ಅನಿಲ್ ರಾಜಶೇಖರ್ ಚಂಡೂರು ಭಾಸ್ಕರ್ ಅವರಿಗೆ ಕೋರ್ಟ್ ದಂಡ ವಿಧಿಸಿದ್ದು, ಒಂದು ವೇಳೆ ಈ ದಂಡ ಪಾವತಿಸದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದೆ.

ಬಿ. ನಾಗೇಂದ್ರ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್ ಸಿಕ್ಕರೆ ನಾಗೇಂದ್ರ ಮತ್ತೆ ಸಂಪುಟಕ್ಕೆ ವಾಪಸ್: ಸಚಿವ ಪರಮೇಶ್ವರ್

ದೂರುದಾರ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಹಾಗೂ ಮಾಜಿ ಸಚಿವ ನಾಗೇಂದ್ರ ಹಾಗೂ ಅನಿಲ್ ರಾಜಶೇಖರ್ ಚುಂಡೂರು ಭಾಸ್ಕರ್ ಪಾಲುದಾರಿಕೆಯ ಬಿ.ಸಿ. ಇನ್ಫ್ರಾಸ್ಟ್ರಕ್ಚರ್ ಅಂಡ್ ರಿಸೋರ್ಸ್ ಕಂಪನಿ ನಡುವೆ 2013 ರಿಂದಲೂ ಹಣಕಾಸು ವಿವಾದವಿತ್ತು.

ವಿಎಸ್‌ಎಲ್ ಕಂಪೆನಿ ಪರವಾಗಿ ಕೋರ್ಟ್ ಆದೇಶ ನೀಡಿದ್ದು, ಬಿ. ನಾಗೇಂದ್ರ ಪಾಲುದಾರಿಕೆಯ ಕಂಪೆನಿ ಒಟ್ಟು 2 ಕೋಟಿ 53 ಲಕ್ಷ ಪಾವತಿಸಬೇಕಿತ್ತು. ಇದರ ಭಾಗವಾಗಿ 1 ಕೋಟಿ ರೂಪಾಯಿಯ ಚೆಕ್ ಅನ್ನು ನೀಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com