ಮಾಹಿತಿ-ದಾಖಲೆ ಒದಗಿಸಿ, ಅಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ: ಸಚಿವ ಸಂತೋಷ್ ಲಾಡ್

ಧಾರವಾಡದ ಕಲಘಟಗಿ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಮದ್ಯ ಮಾರಾಟದ ವರದಿ ಹಿನ್ನೆಲೆಯಲ್ಲಿ ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.
ಸಚಿವ ಸಂತೋಷ್ ಲಾಡ್
ಸಚಿವ ಸಂತೋಷ್ ಲಾಡ್
Updated on

ಧಾರವಾಡ: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಜಿಲ್ಲಾ ಸಚಿವ ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದು, ದಾಖಲೆ ಒದಗಿಸಿ, ಕ್ರಮ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.

ಧಾರವಾಡದ ಕಲಘಟಗಿ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಮದ್ಯ ಮಾರಾಟದ ವರದಿ ಹಿನ್ನೆಲೆಯಲ್ಲಿ ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಮದ್ಯ ಮಾರಾಟ ಕುರಿತು ಯಾರಾದರೂ ಸಂಬಂಧಪಟ್ಟ ವ್ಯಕ್ತಿಗಳು ಅಥವಾ ಅಂಗಡಿಗಳ ಚಿತ್ರಗಳು ಸೇರಿದಂತೆ ದಾಖಲೆಗಳನ್ನು ನೀಡಿದರೆ, ಕ್ರಮ ಕೈಗೊಳ್ಳುತ್ತೇನೆಂದು ಹೇಳಿದರು.

ಇದೇ ವೇಳೆ ಸಾರ್ವಜನಿಕರ ವಿರುದ್ಧವೂ ಅವರು ಅಸಮಾಧಾನ ವ್ಯಕ್ತಪಡಿಸಿದ ಅವರು, ಜನರು ಆರೋಪಗಳನ್ನು ಮಾಡುತ್ತಾರೆ. ಆದರೆ, ದಾಖಲೆ ಹಾಗೂ ಮಾಹಿತಿಗಳನ್ನು ಒದಗಿಸಲು ಹಿಂಜರಿಯುತ್ತಾರೆ ಎಂದು ಹೇಳಿದರು.

ಅಕ್ರಮ ಮದ್ಯ ಮಾರಾಟದ ಬಗ್ಗೆ ಯಾರಾದರೂ ನನಗೆ ಮಾಹಿತಿ ನೀಡಿದರೆ ನಾನು ವೈಯಕ್ತಿಕವಾಗಿ ಮಧ್ಯಪ್ರವೇಶಿಸುತ್ತೇನೆ ಮತ್ತು ಅಂಗಡಿಗಳನ್ನು ಮುಚ್ಚುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇನೆಂದು ತಿಳಿಸಿದರು.

ಬೃಹತ್ ಮದ್ಯ ಖರೀದಿದಾರರ ಮೇಲೆ ನಿಗಾ ಇಡುವಂತೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಗ್ರಾಮೀಣ ಪ್ರದೇಶಗಳಲ್ಲಿನ ಮದ್ಯದ ಅಂಗಡಿಗಳಲ್ಲಿ ಮತ್ತು ಸುತ್ತಮುತ್ತ ಸಿಸಿಟಿವಿಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಚಿವ ಸಂತೋಷ್ ಲಾಡ್
ಮದ್ಯ ಅಕ್ರಮ ಸಾಗಣೆ ತಡೆಗೆ ಕ್ರಮ: ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಗೋವಾ ವಿಪಕ್ಷ ನಾಯಕ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com