ಬಿರುಬೇಸಿಗೆ ನಡುವೆ ಜನಕ್ಕೆ ನೀರಿನ ದರ ಹೆಚ್ಚಳದ ಶಾಕ್: ಯಾರಿಗೆ ಎಷ್ಟು ಹೆಚ್ಚಳ ಇಲ್ಲಿದೆ ಮಾಹಿತಿ..

ಬೆಲೆ ಏರಿಕೆಯ ಪರಿಣಾಮವಾಗಿ ಒಟ್ಟಾರೆಯಾಗಿ ಗೃಹ ಬಳಕೆದಾರರಿಗೆ ತಿಂಗಳಿಗೆ 20-30 ರೂ. ಹೆಚ್ಚುವರಿ ಹೊರೆಯಾಗುವ ಸಾಧ್ಯತೆ ಇದೆ.
Water
ಕುಡಿಯುವ ನೀರುonline desk
Updated on

ಬೆಂಗಳೂರು: ಬೇಸಿಗೆಯಲ್ಲಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ, ಈ ನಡುವೆ ಬಿಡಬ್ಲ್ಯುಎಸ್ಎಸ್ ಬಿ ನಿರೀಕ್ಷೆಯಂತೆಯೇ ನೀರಿನ ದರ ಹೆಚ್ಚಳ ಮಾಡುವುದನ್ನು ಸ್ಪಷ್ಟಪಡಿಸಿದೆ.

ಬೆಲೆ ಏರಿಕೆ ಬಗ್ಗೆ ಮಾತನಾಡಿರುವ ಬಿಡಬ್ಲ್ಯುಎಸ್ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಗೃಹ ಬಳಕೆ ಕನೆಕ್ಷನ್​ಗೆ ಲೀಟರ್​ ಗೆ ಗರಿಷ್ಠ ಒಂದು ಪೈಸೆ ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ. ಬೆಲೆ ಏರಿಕೆಯ ಪರಿಣಾಮವಾಗಿ ಒಟ್ಟಾರೆಯಾಗಿ ಗೃಹ ಬಳಕೆದಾರರಿಗೆ ತಿಂಗಳಿಗೆ 20-30 ರೂ. ಹೆಚ್ಚುವರಿ ಹೊರೆಯಾಗುವ ಸಾಧ್ಯತೆ ಇದೆ. ನೀರು ಬಳಕೆಯ ಆಧಾರದ ಮೇಲೆ ಸ್ಲ್ಯಾಬ್​​ಗಳನ್ನು ನಿಗದಿಪಡಿಸಲಾಗಿದ್ದು, ಎಷ್ಟು ಬಳಕೆಗೆ ಎಷ್ಟು ದರ ಏರಿಕೆಯಾಲಿದೆ ಎಂಬ ಬಗ್ಗೆ ರಾಮ್ ಪ್ರಸಾತ್ ಮನೋಹರ್ ವಿವರಗಳನ್ನು ನೀಡಿದ್ದಾರೆ.

ನೀರಿನ ದರ ಏರಿಕೆ ವಿವರ ಹೀಗಿದೆ…

  • 0-8 ಸಾವಿರದೊಳಗೆ ಸ್ಲ್ಯಾಬ್​ಗೆ ಲೀಟರ್​ಗೆ 0.15 ಪೈಸೆ ಹೆಚ್ಚಳ.

  • 8-25 ಸಾವಿರದೊಳಗಿನ ಸ್ಲ್ಯಾಬ್​ಗೆ ಲೀಟರ್​ಗೆ 0.40 ಪೈಸೆ

  • 25 ಸಾವಿರ ಲೀಟರ್​ಗಿಂತ ಹೆಚ್ಚು ಬಳಕೆ ಮಾಡಿದ್ರೆ 0.80 ಪೈಸೆ ಏರಿಕೆ.

  • 50 ಸಾವಿರದಿಂದ 1 ಲಕ್ಷ ಲೀಟರ್ ನೀರು ಬಳಕೆಗೆ 1 ಪೈಸೆ ಹೆಚ್ಚಳ.

Water
BWSSB ಹೊಸ ಪರಿಹಾರ ಸೂತ್ರ: ಕಾವೇರಿ ನೀರು ಸಂಪರ್ಕಕ್ಕೂ EMI ಸೌಲಭ್ಯ!

ಇನ್ನು ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಏಪ್ರಿಲ್ 1ರಿಂದ ಶೇ. 3ರಷ್ಟು ನೀರಿನ ದರ ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆದಾರರಿಗೆ ಪ್ರತಿ ತಿಂಗಳು 50-60 ರೂ. ಹೊರೆಯಾಗಬಹುದು ಎಂದು ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

ಬೆಂಗಳೂರು ಜಲ ಮಂಡಳಿ 2014 ರಿಂದ ಈವರೆಗೆ ನಗರದಲ್ಲಿ ನೀರು ಪೂರೈಕೆ ದರ ಹೆಚ್ಚಳ ಮಾಡಿಲ್ಲ. ಮಂಡಳಿ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದೆ. ಹೀಗಾಗಿ ಲೀಟರಿಗೆ ಒಂದು ಪೈಸೆಯಷ್ಟಾದರೂ ದರ ಏರಿಕೆ ಮಾಡಲೇಬೇಕಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com