ಆನ್‌ಲೈನ್ ಬೆಟ್ಟಿಂಗ್, ಜೂಜಾಟ ನಿಯಂತ್ರಿಸಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲಿದೆ: ಜಿ ಪರಮೇಶ್ವರ

ಹಿರಿಯ ಅಧಿಕಾರಿಗಳು ಮತ್ತು ಉದ್ಯಮದ ಪ್ರತಿನಿಧಿಗಳ ಸಮಿತಿಯನ್ನು ರಚಿಸಲಾಗಿದೆ ಮತ್ತು ಪ್ರಸ್ತಾವಿತ ಮಸೂದೆಯ ಕರಡನ್ನು ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದರು.
ಜಿ ಪರಮೇಶ್ವರ
ಜಿ ಪರಮೇಶ್ವರ
Updated on

ಮಂಡ್ಯ: ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟವನ್ನು ನಿಯಂತ್ರಿಸಲು ರಾಜ್ಯದಲ್ಲಿ ಹೊಸ ಕಾನೂನನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳು ಮತ್ತು ಉದ್ಯಮದ ಪ್ರತಿನಿಧಿಗಳ ಸಮಿತಿಯನ್ನು ರಚಿಸಲಾಗಿದೆ ಮತ್ತು ಪ್ರಸ್ತಾವಿತ ಮಸೂದೆಯ ಕರಡನ್ನು ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದರು.

'ನೆನ್ನೆ ನಾನು ಐಟಿ ಸಚಿವರೊಂದಿಗೆ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಸಂಬಂಧಿಸಿದಂತೆ ಸಭೆಯ ಅಧ್ಯಕ್ಷತೆ ವಹಿಸಿದ್ದೆ. ಉದ್ಯಮದ ಪ್ರತಿನಿಧಿಗಳನ್ನು ಕರೆಯಲಾಗಿತ್ತು. ಇಲ್ಲಿಯವರೆಗೆ ಇವುಗಳನ್ನು ನಿಯಂತ್ರಿಸಲು ಯಾವುದೇ ಕಾನೂನು ಇಲ್ಲ. ಹೀಗಾಗಿ, ಪರವಾನಗಿ ವ್ಯವಸ್ಥೆ ಮತ್ತು ಕಾನೂನಿನ ಪ್ರಕಾರ ನಿಯಂತ್ರಣವನ್ನು ಪರಿಚಯಿಸಲು ಒಪ್ಪಿಕೊಂಡಿದ್ದಾರೆ' ಎಂದು ಪರಮೇಶ್ವರ ಹೇಳಿದರು.

'ಕರಡು ಸಲ್ಲಿಸಿದ ನಂತರ, ನಾವು ಹೊಸ ಕಾನೂನನ್ನು ಜಾರಿಗೆ ತರುತ್ತೇವೆ' ಎಂದು ಅವರು ಹೇಳಿದರು.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸಂಪೂರ್ಣ ಆನ್‌ಲೈನ್ ಗೇಮಿಂಗ್, ರಿಯಲ್ ಮನಿ ಗೇಮಿಂಗ್ ಅನ್ನು ಕಾನೂನಿನ ಅಡಿಯಲ್ಲಿ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕಳೆದ ತಿಂಗಳು ಹೇಳಿದ್ದರು.

ಜಿ ಪರಮೇಶ್ವರ
ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಸಂಬಂಧಿಸಿದ ಕಂಪನಿಗಳ 5.87 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ ಇಡಿ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com