ಹುಬ್ಬಳ್ಳಿ-ಬೆಳಗಾವಿ Airport ಗಳಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾನಮಾನ ನೀಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

ರಾಜ್ಯದಲ್ಲಿ ವಿಮಾನಯಾನ ಸೌಕರ್ಯ ಹೆಚ್ಚಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆಗೆ ಅವರು ಮಂಗಳವಾರ ಸಭೆ ನಡೆಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣ
ಹುಬ್ಬಳ್ಳಿ ವಿಮಾನ ನಿಲ್ದಾಣ
Updated on

ಬೆಂಗಳೂರು: ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಮೇಲ್ದರ್ಜೆಗೇರಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ ಎಂದು ಇಲಾಖೆಯ ಅಧಿಕಾರಿಗಳಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ಮಂಗಳವಾರ ಸೂಚನೆ ನೀಡಿದರು.

ರಾಜ್ಯದಲ್ಲಿ ವಿಮಾನಯಾನ ಸೌಕರ್ಯ ಹೆಚ್ಚಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆಗೆ ಅವರು ಮಂಗಳವಾರ ಸಭೆ ನಡೆಸಿದರು.

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳೆರಡೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಲು ಅರ್ಹವಾಗಿವೆ. ಈ ನಿಲ್ದಾಣದಿಂದ ಹಲವೆಡೆಗೆ ವಿಮಾನಯಾನ ಸಂಪರ್ಕವಿದೆ. ಅಲ್ಲಿ ಪ್ರಯಾಣಿಕರ ದಟ್ಟಣೆಯೂ ಹೆಚ್ಚಾಗಿದೆ. ಅದನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಅಭಿವೃದ್ಧಿಪಡಿಸುವ ಹಲವು ಅವಕಾಶಗಳಿವೆ. ಈ ಸಂಬಂಧ ವಿಸ್ತೃತ ವರದಿಯನ್ನು ಸಿದ್ಧಪಡಿಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಈ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಬೇಕೆಂದು ಸೂಚಿಸಿದರು.

ವಿಮಾನ ಸಂಚಾರಕ್ಕೆ ಕಲಬುರಗಿ ಹೆಚ್ಚು ಲಾಭದಾಯಕ ಮಾರ್ಗವಾಗಿದ್ದರೂ, ಬೆಂಗಳೂರಿನಿಂದ ಕಲಬುರಗಿಗೆ ವಾರಕ್ಕೆ ಕೇವಲ ಮೂರು ದಿನ ಮಾತ್ರ ವಿಮಾನ ಸಂಚಾರ ಇದೆ. ಇದನ್ನು ಮತ್ತಷ್ಟು ಹೆಚ್ಚಿಸಬೇಕು. ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ನಗರ ಹಾಗೂ ಅನ್ಯ ರಾಜ್ಯಗಳ ಪ್ರಮುಖ ನಗರಗಳಿಗೂ ಸಂಪರ್ಕ ಕಲ್ಪಿಸಬೇಕು ಎನ್ನುವ ಬೇಡಿಕೆಯನ್ನು ಇಬ್ಬರೂ ಸಚಿವರು ಸಭೆಯಲ್ಲಿ ಮಂಡಿಸಿದರು. ಇದಕ್ಕೆ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

ವಿಮಾನ ಸಂಚಾರದ ಜೊತೆಗೆ ಈ ವಿಮಾನ ನಿಲ್ದಾಣಗಳನ್ನು ವಿಮಾನಗಳ ನಿರ್ವಹಣೆ ಮತ್ತು ರಿಪೇರಿ (ಎಂಆರ್‌ಓ) ಕೇಂದ್ರಗಳಾಗಿಯೂ ಬಳಸಬಹುದು. ದೊಡ್ಡ ದೊಡ್ಡ ನಗರಗಳಲ್ಲಿ ಈ ಸೇವೆ ದುಬಾರಿ ಕೂಡ ಆಗುತ್ತದೆ. ಹೀಗಾಗಿ ಬೆಳಿಗ್ಗೆ ಇಂತಹ ನಗರಗಳಿಂದ ಪ್ರಯಾಣಿಕರನ್ನು ಹೊತ್ತೊಯ್ದು ರಾತ್ರಿ ನಿಲುಗಡೆಗೆ ವಾಪಸ್ಸಾಗಬಹುದು. ಬೇಕಾದರೆ ನಿಲುಗಡೆ ಶುಲ್ಕದಿಂದ ವಿನಾಯಿತಿ ನೀಡಬಹುದು ಎಂದು ಸಚಿವರು ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಲಬುರಗಿಯಲ್ಲಿ ಈ ವ್ಯವಸ್ಥೆ ಮಾಡಿಕೊಡಲು ತಾವು ಸಿದ್ಧ ಇರುವುದಾಗಿಯೂ ಸಚಿವ ಖರ್ಗೆ ಹೇಳಿದರು. ಇದಕ್ಕೆ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಸ್ಪಂದಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣ
ಬೆಂಗಳೂರಿನ 2ನೇ ವಿಮಾನ‌ ನಿಲ್ದಾಣ: ಬಿಡದಿ ಔಟ್; ಈ ಎರಡು ಜಾಗ ಫಿಕ್ಸ್!

ಮೈಸೂರು, ಕಲಬುರಗಿ, ಬೀದರ್, ವಿದ್ಯಾನಗರ ವಿಮಾನ ನಿಲ್ದಾಣಗಳ ಉಪಯೋಗ ಗರಿಷ್ಠ ಮಟ್ಟದಲ್ಲಿ ಆಗುತ್ತಿಲ್ಲ. ಕಲಬುರಗಿ-ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ವಾರಕ್ಕೆ ಮೂರು ದಿನ ಮಾತ್ರ ವಿಮಾನ ಓಡಾಡುತ್ತಿದೆ. ಸ್ಟಾರ್ ಮತ್ತು ಅಲೈಯನ್ಸ್ ವಿಮಾನಯಾನ ಸಂಸ್ಥೆಗಳು ಮೂರು ವರ್ಷಗಳಿಂದ ಹಾರಾಟ ನಿಲ್ಲಿಸಿವೆ. ಕಲಬುರಗಿ ಪ್ರವಾಸೋದ್ಯಮ ಕೇಂದ್ರವಾಗಿದೆ. ಇಲ್ಲಿಂದ ಪುಣೆ, ತಿರುಪತಿ, ಚೆನ್ನೈ, ಮುಂಬೈ ಹೀಗೆ ಹಲವು ಭಾಗಗಳಿಗೆ ವಿಮಾನ ಸಂಚಾರ ಆರಂಭಿಸಿದರೆ ಖಂಡಿತವಾಗಿಯೂ ಲಾಭ ತಂದುಕೊಡಲಿದೆ. ಇಂತಹ ಮಾರ್ಗಗಳಲ್ಲಿ ಸಂಸ್ಥೆಗಳು ಪ್ರಾಯೋಗಿಕ ಸೇವೆ ಕೈಗೊಂಡು ನೋಡಬಹುದು ಎಂದರು.

ಮೈಸೂರು ವಿಮಾನ ನಿಲ್ದಾಣದಿಂದ ಕೂಡ ವೈಮಾನಿಕ ಸೇವೆ ಹೆಚ್ಚಾಗಬೇಕು. ಇಲ್ಲಿಂದ ಗೋವಾ, ಕೊಚ್ಚಿನ್, ಹೈದರಾಬಾದ್ ಮುಂತಾದ ನಗರಗಳಿಗೂ ವಿಮಾನಸೇವೆ ಆರಂಭಿಸಬಹುದು. ಬೆಳಗಾವಿಯಿಂದ ಈಗ ವಾರಕ್ಕೆ 44 ವಿಮಾನಗಳು ಓಡಾಡುತ್ತಿವೆ. ಇಲ್ಲಿಂದ ಪುಣೆಗೆ ವಿಮಾನಸೇವೆ ಆರಂಭಿಸಬೇಕೆಂಬ ಬೇಡಿಕೆ ಇದೆ. ಆದರೆ, ಲ್ಯಾಂಡಿಂಗ್ ಸಮಯದ ಅನಾನುಕೂಲತೆ ಇದೆ. ಇಲ್ಲಿಂದ ಚೆನ್ನೈ, ಕೊಚ್ಚಿ ಮುಂತಾದ ಕಡೆಗಳಿಗೆ ವಿಮಾನ ಸೇವೆಗೆ ಒಳ್ಳೆಯ ಅವಕಾಶವಿದ್ದು, ಕಲಬುರಗಿಗೂ ಸೇವೆ ಆರಂಭಿಸಬಹುದು ಎಂದು ವಿವರಿಸಿದರು.

ಜಿಂದಾಲ್ ಟೌನ್-ಶಿಪ್‌ನಲ್ಲಿರುವ ವಿಮಾನ ನಿಲ್ದಾಣದಿಂದ ಹೈದರಾಬಾದ್‌ಗೆ ಮಾತ್ರ 2 ವಿಮಾನ ಓಡಾಡುತ್ತಿದೆ. ಇಲ್ಲಿಂದ ಬೆಂಗಳೂರಿಗೂ ವಿಮಾನಯಾನ ಸೇವೆ ಆರಂಭವಾಗಬೇಕು. ಜೊತೆಗೆ ಜಿಂದಾಲ್ ಟೌನ್ಶಿಪ್‌ನಲ್ಲಿ ವಿದೇಶೀಯರೂ ಹೆಚ್ಚಾಗಿದ್ದಾರೆ. ಹತ್ತಿರದಲ್ಲೇ ವಿಶ್ವವಿಖ್ಯಾತ ಹಂಪೆ ಇದೆ. ಆದ್ದರಿಂದ ಬೆಂಗಳೂರು-ಜಿಂದಾಲ್-ಗೋವಾ ಈ ಮಾರ್ಗದಲ್ಲಿ ವಿಮಾನ ಓಡಾಡಿದರೆ ಪರಿಣಾಮಕಾರಿ ಎಂದು ತಿಳಿಸಿದರು.

ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಕೇಂದ್ರ ಸರ್ಕಾರದ ಪರಿಸರ ಇಲಾಖೆಯ ಅನುಮತಿ ಬಾಕಿ ಇದೆ. ವಿಮಾನಯಾನ ಸಂಸ್ಥೆಗಳು ಈಗಿನಿಂದಲೇ ತಮ್ಮ ಸೇವೆ ಆರಂಭಿಸಲು ಸಿದ್ಧತೆ ಮಾಡಿಕೊಂಡಿರಬೇಕು. ಈ ವಿಮಾನ ನಿಲ್ದಾಣ ಆರಂಭವಾದರೆ ಮಹಾರಾಷ್ಟ್ರ, ತೆಲಂಗಾಣ, ಉತ್ತರ ಭಾರತದ ಹಲವು ನಗರಗಳಿಗೆ ವಿಮಾನಸೇವೆ ಸುಲಭವಾಗಲಿದೆ ಎಂದರು.

ಇದೇ ವೇಳೆ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನ ಸೇವೆಯನ್ನು ಸ್ಟಾರ್ ಎರ್ ಸಂಸ್ಥೆಯು ಇದೇ ತಿಂಗಳ 15ರಿಂದ ಪುನಾರಂಭ ಮಾಡಲಿದೆ ಎಂದು ಸಚಿವರು ತಿಳಿಸಿದರು

ಹುಬ್ಬಳ್ಳಿ ವಿಮಾನ ನಿಲ್ದಾಣ
ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಸಂಭಾವ್ಯ ಸ್ಥಳವಾಗಿ 'ಶಿರಾ'; ಶಾಸಕ ಅಭಿಯಾನ!

ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ಎರಡು ತಾಣ ವೀಕ್ಷಿಸಿದ AAI ತಂಡ

ಬೆಂಗಳೂರು ನಗರದ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರವು ಗುರುತಿಸಿರುವ 3 ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ 2 ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ಅಧಿಕಾರಿಗಳ ತಂಡವು ಮಂಗಳವಾರ ನಡೆಸಿತು.

ನಂತರ ತಂಡದ ಸದಸ್ಯರು ಸಚಿವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿ, ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ಎಂ.ಬಿ. ಪಾಟೀಲ್ ಸಲಹೆ ನೀಡಿದರು,

ತಂಡವು ಇಂದು ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ. ಬಳಿಕ ಪ್ರಾಧಿಕಾರದ ಅಭಿಪ್ರಾಯ ತಿಳಿದುಕೊಂಡು, ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com