ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು

ಹುಬ್ಬಳ್ಳಿಯಲ್ಲಿ ಮಾಡಿದ್ದಾರೆ ಎನ್ನಲಾದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌.
BJP MLA Basanagouda Patil Yatnal
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್online desk
Updated on

ಬೆಂಗಳೂರು: ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹುಬ್ಬಳ್ಳಿಯಲ್ಲಿ ಮಾಡಿದ್ದಾರೆ ಎನ್ನಲಾದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌.

ಏಪ್ರಿಲ್ 7 ರಂದು ಹುಬ್ಬಳ್ಳಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಯತ್ನಾಳ್ ಅವರು, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಅವರ ಬಗ್ಗೆ ಯತ್ನಾಳ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಬಾಳಾ ಸಾಹೇಬ್ ಠಾಕ್ರೆ ಅವರ ಮನೆಯಲ್ಲಿ ಜನಿಸಿದರು" ಎಂದು ಆಧಾರರಹಿತ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟು ಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಮತ್ತು ಬಿಎನ್‌ಎಸ್‌ನ ಸೆಕ್ಷನ್ 196 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶ), 299 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು 353 (ಕೋಮು ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಬಹುದು. ಪ್ರಮುಖ ಕನ್ನಡ ಸುದ್ದಿ ಸಂಸ್ಥೆಗಳ ಅಧಿಕೃತ ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಹಲವಾರು ವೇದಿಕೆಗಳಲ್ಲಿ ಭಾಷಣವನ್ನು ಪ್ರಸಾರ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com