ಯಾದಗಿರಿಯಲ್ಲಿ ಬೊಲೆರೊ-ಸಾರಿಗೆ ಬಸ್ ನಡುವೆ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
After the accident
ಅಪಘಾತ ನಂತರ ದೃಶ್ಯ
Updated on

ಯಾದಗಿರಿ: ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎಯಲ್ಲಿ ಕಳೆದ ರಾತ್ರಿ‌ ನಡೆದಿದೆ.

ಯಾದಗಿರಿ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವರ್ಕನಹಳ್ಳಿ ಗ್ರಾಮದವರಾದ ಬುಲೆರೊ ಚಾಲಕ ಶರಣಪ್ಪ(30ವ), ಸುನೀತಾ(19ವ), ಸೋಮವ್ವ(50ವ) ಮತ್ತು ತಂಗಮ್ಮ(55ವ) ಮೃತಪಟ್ಟವರಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್​​ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬುಲೆರೋ ವಾಹನದಲ್ಲಿದ್ದ ಇನ್ನೂ ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com