ಜಾತಿಗಣತಿಯಲ್ಲಿ 1,01,60,000 ಜನರು ಭಾಗಿ: ಶೇ. 95 ರಷ್ಟು ನಿಖರ!

ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದಲ್ಲಿ ಜಾತಿ ಗಣತಿ ವರದಿ ಬಗ್ಗೆ ತೀವ್ರವಾಗಿ ಚರ್ಚೆಯಾಗುತ್ತಿರುವಂತೆಯೇ, ವೈಜ್ಞಾನಿಕ ಹಾಗೂ ಸಮರ್ಪಕವಾಗಿ ಜಾತಿಗಣತಿ ನಡೆಸಲಾಗಿದ್ದು, ಇದರಲ್ಲಿ 1,01,60,000 ಜನರು ಭಾಗಿಯಾಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, ಶೇ. 95 ರಷ್ಟು ನಿಖರವಾಗಿ ಸಮೀಕ್ಷೆ ನಡೆಸಲಾಗಿದೆ. ಶೇ. 98 ರಷ್ಟು ಗ್ರಾಮಾಂತರ ಹಾಗೂ ಶೇ.96 ರಷ್ಟುನಗರ ಪ್ರದೇಶಗಳಲ್ಲಿ ನಡೆದ ಸಮೀಕ್ಷೆಯಲ್ಲಿ 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದು ತಿಳಿಸಿದ್ದಾರೆ.

CM Siddaramaiah
ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್: ರಾಜ್ಯ ರಾಜಕೀಯದಲ್ಲಿ ಕಂಪನ; ಜಾತಿ ಗಣತಿ ಮೂಲಕ ಭದ್ರ ಸಿಎಂ ಸ್ಥಾನ!

ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿ ಆರೋಪ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರದಿಂದ ಕೂಡಿದೆ. ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಸರ್ಕಾರವಾಗಿ ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆದಿಲ್ಲ, ಹಲವು ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ ಅನಿವಾರ್ಯತೆಯಿತ್ತು ಎಂದು ಅವರು ತಿಳಿಸಿದ್ದಾರೆ.

ಒಳಮೀಸಲಾತಿ ಜಾರಿಗೆ ತರಲು ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿ ಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com