
ಬೆಳ್ತಂಗಡಿ: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಪುರುಷಗುಡ್ಡೆಯಲ್ಲಿ ನಡೆದಿದೆ. ಮೃತರನ್ನು ಬೆಳ್ಮಣ್ ನಿವಾಸಿಗಳಾದ ಪ್ರಶಾಂತ್ ಮತ್ತು ದಿನೇಶ್ ಎಂದು ಗುರುತಿಸಲಾಗಿದೆ.
ಕಳೆದ ತಡರಾತ್ರಿ ವೇಗವಾಗಿ ಚಲಾಯಿಸುತ್ತಿದ್ದ ಬೈಕ್ ಸವಾರರು ತಿರುವಿನಲ್ಲಿ ರಸ್ತೆ ಕಾಣದೇ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ, ಅತಿ ವೇಗದ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಪೊಲೀಸರು ತಿಳಿಸಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Advertisement