ಐತಿಹಾಸಿಕ ಬೆಂಗಳೂರು ಕರಗ: ಇಂದು, ನಾಳೆ ಈ ಮಾರ್ಗದಲ್ಲಿ ಸಂಚಾರ, ಪಾರ್ಕಿಂಗ್ ನಿರ್ಬಂಧ; ಪರ್ಯಾಯ ಮಾರ್ಗ ಹೀಗಿದೆ...

ನಗರದ ಕೇಂದ್ರ ಭಾಗದಲ್ಲಿರುವ ತಿಗಳರಪೇಟೆಯಲ್ಲಿ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವದ ಆಚರಣೆ ನಡೆಯುತ್ತಿದೆ. ಈ ಕಾರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ.
Bengaluru Karaga (file image)
ಬೆಂಗಳೂರು ಕರಗ (ಸಂಗ್ರಹ ಚಿತ್ರ)
Updated on

ಬೆಂಗಳೂರು: ದಿನಾಂಕ: 12.04.2024 ರಿಂದ ದಿನಾಂಕ: 13.04.2024 ರವರೆಗೆ ಇತಿಹಾಸ ಪ್ರಸಿದ್ದ ಶ್ರೀ ಧರ್ಮರಾಯಸ್ವಾಮಿ ಬೆಂಗಳೂರು ಕರಗದ ಉತ್ಸವದ ನಡೆಯಲಿದೆ. ಕರಗದ ಉತ್ಸವಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಠಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂಬ ಮಾಹಿತಿಯನ್ನು ಬೆಂಗಳೂರು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ನಗರದ ಕೇಂದ್ರ ಭಾಗದಲ್ಲಿರುವ ತಿಗಳರಪೇಟೆಯಲ್ಲಿ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವದ ಆಚರಣೆ ನಡೆಯುತ್ತಿದೆ. ಈ ಕಾರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ. ಬೆಂಗಳೂರು ಕರಗೋತ್ಸವ ಇರುವುದರಿಂದ ಎರಡು ದಿನಗಳ ಕಾಲ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಟ್ರಾಫಿಕ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗದ ಆಚರಣೆಗಳು ನಡೆಯುವುದರಿಂದ ಏಪ್ರಿಲ್‌ 12ರ ರಾತ್ರಿ 10 ಗಂಟೆಯಿಂದ ಏಪ್ರಿಲ್‌ 13ರ ಸಂಜೆ 6 ಗಂಟೆಯವರೆಗೆ ಅವೆನ್ಯೂ ರಸ್ತೆ, ಕೆಆರ್‌ ಮಾರ್ಕೆಟ್‌ ರಸ್ತೆ, ಮಾರುಕಟ್ಟೆ ವೃತ್ತ, ಕಾಟನ್‌ಪೇಟ್‌, ಕೆ.ಜಿ.ರಸ್ತೆ, ಚಿಕ್ಕಪೇಟೆ ಸೇರಿದಂತೆ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಟ್ರಾಫಿಕ್‌ ಪೊಲೀಸರು ತಿಳಿಸಿದ್ದಾರೆ.

Bengaluru Karaga (file image)
ಏಪ್ರಿಲ್ 4ರಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ: ಶೀಘ್ರಗತಿಯಲ್ಲಿ ಕಾಮಗಾರಿ ಕಾರ್ಯ ಪೂರ್ಣಗೊಳಿಸಿ; ಅಧಿಕಾರಿಗಳಿಗೆ BBMP ಸೂಚನೆ

ಧರ್ಮರಾಯಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಡುವುದರಿಂದ ಆ ಸಮಯದಲ್ಲೂ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ ಎಂದು ತಿಳಿಸಲಾಗಿದೆ.ವಾಹನ ಸವಾರರು ಈ ದಿನಗಳಂದು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಲಹೆ ನೀಡಿದ್ದಾರೆ.

ಈ ರಸ್ತೆಗಳ ಬದಲಿಗೆ ಬಳಸಬಹುದಾದ ಪರ್ಯಾಯ ರಸ್ತೆ ಮಾರ್ಗಗಳ ಮಾಹಿತಿ ಇಲ್ಲಿದೆ..

  • ಮಾರ್ಕೆಟ್‌ ವೃತ್ತದಿಂದ ಕೆ.ಜಿ.ರಸ್ತೆ, ಆನಂದ್‌ರಾವ್‌ ಸರ್ಕಲ್‌ ಮೂಲಕ ಮೆಜೆಸ್ಟಿಕ್‌ ಕಡೆಗೆ ಚಲಿಸಬಹುದು.

  • ಎಎಸ್‌ ಚಾರ್‌ ಸ್ಟ್ರೀಟ್‌ನಿಂದ ಸಿಸಿಬಿ ಜಂಕ್ಷನ್‌, ಮೆಡಿಕಲ್‌ ಜಂಕ್ಷನ್‌, ಮಿನರ್ವಾ ಸರ್ಕಲ್‌ ಮತ್ತು ಜೆಸಿ ರಸ್ತೆ ಮೂಲಕ ಟೌನ್‌ಹಾಲ್‌ ಕಡೆಗೆ ಚಲಿಸಬಹುದು.

  • ಶಾಂತಲಾ ಜಂಕ್ಷನ್‌ನಿಂದ ಖೋಡೆ ಜಂಕ್ಷನ್‌, ಹುಣಸೆಮರ ಜಂಕ್ಷನ್‌, ಟ್ಯಾಂಕ್‌ಬಂಡ್‌ ರಸ್ತೆ ಮೂಲಕ ಮೈಸೂರು ರಸ್ತೆ ಕಡೆಗೆ ತೆರಳಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com