ರಾಜ್ಯದಲ್ಲಿ ಡೀಸೆಲ್ ದರ ಏರಿಕೆಗೆ ಆಕ್ರೋಶ: ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಲಾರಿಗಳಿದ್ದು, ಮುಷ್ಕರ ಬೆಂಬಲಿಸುವ ಮೂಲಕ ಸಂಚಾರವನ್ನು ಸ್ಥಗಿತಗೊಳಿಸಲಿವೆ. ಜಲ್ಲಿಕಲ್ಲು, ಮರಳು ಲಾರಿ, ಗೂಡ್ಸ್ ವಾಹನಗಳು ಸೇರಿದಂತೆ ಎಲ್ಲಾ ಮಾದರಿಯ ಸರಕು ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಅವರು ಹೇಳಿದ್ದಾರೆ.
Casual Images
ಲಾರಿ ಮುಷ್ಕರದ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ಶುಲ್ಕದ ಹೆಚ್ಚಳದ ವಿರುದ್ಧ ರಾಜ್ಯ ಲಾರಿ ಮಾಲೀಕರ ಸಂಘ ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ. ಆರ್. ಷಣ್ಮುಗಪ್ಪ, ನಾಳೆ ಮಧ್ಯರಾತ್ರಿಯಿಂದ ಲಾರಿ ಮುಷ್ಕರ ಪಕ್ಕಾ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ, ಹೊರ ರಾಜ್ಯಗಳ ಲಾರಿ ಮಾಲೀಕರು ಸೇರಿದಂತೆ ರಾಜ್ಯವ್ಯಾಪಿ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಲಾರಿಗಳಿದ್ದು, ಮುಷ್ಕರ ಬೆಂಬಲಿಸುವ ಮೂಲಕ ಸಂಚಾರವನ್ನು ಸ್ಥಗಿತಗೊಳಿಸಲಿವೆ. ಜಲ್ಲಿಕಲ್ಲು, ಮರಳು ಲಾರಿ, ಗೂಡ್ಸ್ ವಾಹನಗಳು ಸೇರಿದಂತೆ ಎಲ್ಲಾ ಮಾದರಿಯ ಸರಕು ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ ಈ ಮುಷ್ಕರಕ್ಕೆ ಫೆಡರೇಶನ್ ಆಫ್ ಲಾರಿ ಓನರ್ಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಚನ್ನಾರೆಡ್ಡಿ ವಿರೋಧ ವ್ಯಕ್ತಪಡಿಸಿದ್ದಾರೆ. ನಾವು ಈ ಮುಷ್ಕರವನ್ನು ಬೆಂಬಲಿಸುವುದಿಲ್ಲ. ಲಾರಿಗಳು ಎಂದಿನಂತೆ ಸಂಚರಿಸಲಿವೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ.

Casual Images
ಡೀಸೆಲ್​ ದರ ಏರಿಕೆ: ರಾಜ್ಯ ಸರ್ಕಾರದ ನಡೆ ಖಂಡಿಸಿ ಏಪ್ರಿಲ್ 14 ರಂದು ಲಾರಿ ಮಾಲೀಕರ ಮುಷ್ಕರ

ಪುದುಚೇರಿ ಬಿಟ್ಟರೆ ಕರ್ನಾಟಕದಲ್ಲಿ ಡೀಸೆಲ್ ದರ ಕಡಿಮೆ ಇದೆ. ಈಗಿರುವ ಎರಡು ರೂ. ತೆರಿಗೆ ಹೆಚ್ಚಳ ನೋಡಿದರೆ ಅದು ಹೊರೆಯಾಗಲ್ಲ. ಸರ್ಕಾರದೊಂದಿಗೆ ಘರ್ಷಣೆಗೆ ಇಳಿಯುವ ಬದಲು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಚೆನ್ನಾರೆಡ್ಡಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com