ಹುಬ್ಬಳ್ಳಿಯಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ, ಕೊಲೆ; ಆರೋಪಿ ಎನ್‌ಕೌಂಟರ್‌ಗೆ ಸ್ಥಳೀಯರ ಆಗ್ರಹ!

ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲಿನ ಪೈಶಾಚಿಕ ಕೃತ್ಯಗಳು ನಿಲ್ಲುತ್ತಿಲ್ಲ. ಹೌದು ಹುಬ್ಬಳ್ಳಿಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಭೀಕರ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ, ಕೊಲೆ; ಆರೋಪಿ ಎನ್‌ಕೌಂಟರ್‌ಗೆ ಸ್ಥಳೀಯರ ಆಗ್ರಹ!
Updated on

ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲಿನ ಪೈಶಾಚಿಕ ಕೃತ್ಯಗಳು ನಿಲ್ಲುತ್ತಿಲ್ಲ. ಹೌದು ಹುಬ್ಬಳ್ಳಿಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಭೀಕರ ಘಟನೆ ನಡೆದಿದೆ. ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯ ಶವ ಶೌಚಾಲಯದೊಳಗೆ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂದು ಸ್ಥಳೀಯರು ಮತ್ತು ಪೋಷಕರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹುಬ್ಬಳ್ಳಿ ಪೊಲೀಸರು ಆರೋಪಿಗಳ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದಾರೆ.

ಇಂದು ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ವರದಿಯಾಗಿದೆ. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದು ಹೊರೆಗೆ ಮಗು ಆಟವಾಡುತ್ತಿತ್ತು. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಆರೋಪಿ ಬಾಲಕಿಯನ್ನು ಆಮಿಷವೊಡ್ಡಿ ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದಳು. ಬಾಲಕಿಯ ಪೋಷಕರು ಕೊಪ್ಪಳದವರಾಗಿದ್ದು, ಪೇಂಟಿಂಗ್ ಕೆಲಸಕ್ಕಾಗಿ ಹುಬ್ಬಳ್ಳಿಗೆ ಬಂದಿದ್ದರು ಸ್ಥಳೀಯರ ಪ್ರಕಾರ, ನಿರ್ಮಾಣ ಹಂತದ ಕಟ್ಟಡದ ಬಳಕೆಯಾಗದ ಶೌಚಾಲಯದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.

ಶವ ಪತ್ತೆಯಾದ ಕೂಡಲೇ ಸ್ಥಳೀಯರು, ವಿಶೇಷವಾಗಿ ಮಹಿಳೆಯರು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪ್ರತಿಭಟನಾ ನಿರತ ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಸ್ಥಳೀಯರು ಆರೋಪಿಯನ್ನು ಗುರುತಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದಾಗ್ಯೂ, ಪೊಲೀಸರು ಇನ್ನೂ ಸುಳಿವುಗಳಿಗಾಗಿ ಯತ್ನಿಸುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ, ಕೊಲೆ; ಆರೋಪಿ ಎನ್‌ಕೌಂಟರ್‌ಗೆ ಸ್ಥಳೀಯರ ಆಗ್ರಹ!
ಮದ್ಯಪಾನಕ್ಕೆ ಅವಕಾಶ ನೀಡದ್ದಕ್ಕೆ ವಾಚ್‌ಮನ್‌ ಬರ್ಬರ ಕೊಲೆ; ಮೂವರ ಬಂಧನ

ಅತ್ಯಾಚಾರ ಮತ್ತು ಕೊಲೆ ಎರಡು ಪ್ರಕರಣವನ್ನೂ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ವೈದ್ಯಕೀಯ ಪರೀಕ್ಷೆಯ ನಂತರವೇ ಅತ್ಯಾಚಾರವನ್ನು ದೃಢೀಕರಿಸಬಹುದು. ಬಾಲಕಿಯ ಶವವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com