
ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟ ಸಮೀಪದ ಕಾಡುಹೊಲ ಗ್ರಾಮದಲ್ಲಿ ಎರಡು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 30 ವರ್ಷದ ಸುಶೀಲ, ಮಕ್ಕಳಾದ 11 ವರ್ಷದ ದಿವ್ಯ ಮತ್ತು 8 ವರ್ಷದ ಚಂದ್ರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement