ಜಾತಿ ಗಣತಿ ವರದಿ: ನಾಳೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಮಹತ್ವದ ಸಭೆ!

ಜಾತಿ ಗಣತಿ ವರದಿ ಬಿಡುಗಡೆಯಾದರೆ, ತೆಲಂಗಾಣ ನಂತರ ಕಾಂಗ್ರೆಸ್ ಆಡಳಿದ ಎರಡನೇ ರಾಜ್ಯದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದಂತಾಗುತ್ತದೆ.
DCM DK Shivakumar
ಡಿಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಜಾತಿ ಗಣತಿ ವರದಿ ಕುರಿತ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವಂತೆಯೇ ಡಿಸಿಎಂ ಡಿಕೆ ಶಿವಕುಮಾರ್ ನಾಳೆ ತಮ್ಮ ನಿವಾಸದಲ್ಲಿ ಒಕ್ಕಲಿಗ ಶಾಸಕರ ಮಹತ್ವದ ಸಭೆ ಕರೆದಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಜಾತಿ ಗಣತಿ ವಿಚಾರವಾಗಿ ನಾಳೆ (ಮಂಗಳವಾರ) ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ತಿಳಿಸಿದರು.

ಜಾತಿ ಗಣತಿ ವರದಿ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ, “ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ ಎಂದರು.

ನಾಳೆ ಸಂಜೆ ಸಭೆ: ಬೆಂಗಳೂರಿನ ಕುಮಾರ ಪಾರ್ಕ್ ಗಾಂಧಿ ಭವನ ರಸ್ತೆಯಲ್ಲಿರುವ ಡಿಸಿಎಂ ಅವರ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಸಂಜೆ 6.00 ಗಂಟೆಗೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಸಭೆ ಕರೆಯಲಾಗಿದೆ.

ಎಲ್ಲರಿಗೂ ನ್ಯಾಯ ಒದಗಿಸುವ ಪಕ್ಷ ಕಾಂಗ್ರೆಸ್: ಧರ್ಮದ ಆಧಾರದಲ್ಲಿ ಟೆಂಡರ್ ನೀಡಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳನ್ನು ಕಾಂಗ್ರೆಸ್ ಸರ್ಕಾರ ಕಸಿಯುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, "ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೂ ಮೀಸಲಾತಿ ನೀಡಲಾಗಿದೆ. ಸಮಾಜದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆ. ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷ" ಎಂದರು.

ಒಬಿಸಿಗಳ ಮೀಸಲಾತಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ ಎನ್ನುವ ಪ್ರಧಾನಿ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಬೆಂಗಳೂರಿನ ಸಂಸದರೊಬ್ಬರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಎದೆ ಸೀಳಿದರೆ ಅಕ್ಷರವಿಲ್ಲ, ಪಂಕ್ಚರ್ ಹಾಕಲು ಮಾತ್ರ ಸೀಮಿತ ಎಂದು ದ್ವೇಷ ಕಾರಿದ್ದರು. ಆದರೆ ನಾವು ಆ ಸಮುದಾಯ ಇತರೇ ಕೆಲಸಗಳನ್ನು ಮಾಡಲು ಸಾಮರ್ಥ್ಯ ಹೊಂದಿದೆ ಎಂದು ತೋರಿಸಬೇಕಾಗಿದೆ" ಎಂದು ಹೇಳಿದರು.

DCM DK Shivakumar
ಜಾತಿ ಗಣತಿ ವರದಿ 'ಬಹಿರಂಗ': ಪರಿಶಿಷ್ಟ ಜಾತಿ ನಂ.1; ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಆಯೋಗ ಶಿಫಾರಸು!

ಇದಕ್ಕೂ ಮುನ್ನಾ ಮಾತನಾಡಿದ ಮುಖ್ಯಮಂತ್ರಿ, ಜಾತಿ ಗಣತಿ ವರದಿ ಕುರಿತು ಚರ್ಚಿಸಲು ಏಪ್ರಿಲ್ 17 ರಂದು ವಿಶೇಷ ಕ್ಯಾಬಿನೆಟ್ ಸಭೆ ಕರೆಯಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನಿರ್ಮಿಸಲು ಬಯಸಿದ ಸಮಾಜವನ್ನು ನಿರ್ಮಿಸಲು ತಮ್ಮ ಸರ್ಕಾರ ಶ್ರಮಿಸುತ್ತದೆ ಎಂದು ಹೇಳಿದರು.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಶ್ರಮಿಸಲಿದೆ...ಜಾತಿ ಗಣತಿ ವರದಿ ಕುರಿತು ವಿಶೇಷ ಸಚಿವ ಸಂಪುಟ ಸಭೆಯನ್ನು ಏಪ್ರಿಲ್ 17ರಂದು ಕರೆಯಲಾಗಿದೆ. ಇದರಲ್ಲಿ ಇದೊಂದೆ ವಿಷಯ ಕುರಿತು ಚರ್ಚೆಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

DCM DK Shivakumar
ಸಿದ್ದರಾಮಯ್ಯ ನಿವಾಸದಲ್ಲಿ ಜಾತಿ ಗಣತಿ ಮಾಡಲಾಗಿದೆ: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಜಾತಿ ಗಣತಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಯನ್ನು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟಕ್ಕೆ ಸಲ್ಲಿಸಿದೆ. ಜಾತಿ ಗಣತಿ ವರದಿ ಬಿಡುಗಡೆಯಾದರೆ, ತೆಲಂಗಾಣ ನಂತರ ಕಾಂಗ್ರೆಸ್ ಆಡಳಿದ ಎರಡನೇ ರಾಜ್ಯದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದಂತಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com