
ದಾವಣಗೆರೆ: ಸಮಾಜವೇ ತಲೆ ತಗ್ಗಿಸುವ ಘಟನೆ ನಡೆಯುತ್ತಿದ್ದರೂ ಅಲ್ಲಿ ನೆರೆದಿದ್ದ ಜನರು ವಿಡಿಯೋ ಮಾಡುವುದರಲ್ಲಿ ಮಗ್ನರಾಗಿದ್ದರು. ಹೌದು... ಆರು ಜನ ಆರೋಪಿಗಳು ಮುಸ್ಲಿಂ ಮಹಿಳೆಗೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 9ರಂದೇ ಪ್ರಕರಣ ನಡೆದಿತ್ತು. ಹಲ್ಲೆ ಮಾಡಿದ ವಿಡಿಯೋವನ್ನು ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ನಯಾಜ್ (32), ಮೊಹಮ್ಮದ್ ಗೌಸ್ ಪೀರ್ (45), ಚಾಂದ್ ಪೀರ್ (35), ಇನಾಯಿತ್ ಉಲ್ಲಾ (51), ದಸ್ತಗೀರ್ (24) ಹಾಗೂ ರಸೂಲ್ ಟಿಆರ್ (42) ಎಂದು ಗುರುತಿಸಲಾಗಿದೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಪಂಚಾಯಿತಿ ಮಾಡಲು ಮಸೀದಿಗೆ ಕರೆಸಿದ್ದರು. ಆಗ ಕಮಿಟಿಯ ಕೆಲವರು ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ.
Advertisement