
ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ಪಾರ್ಕ್ ಒಂದರಲ್ಲಿ ಕುಳಿತಿದ್ದ ಮುಸ್ಲಿಂ ಯುವತಿ, ಹಿಂದೂ ಯುವಕನನ್ನು ಮುಸ್ಲಿಂ ಯುವಕರು ಪ್ರಶ್ನಿಸಿದ್ದಾರೆ. ಮುಸ್ಲಿಂ ಯುವತಿಯಾಗಿ ನೀನು ಇಂತಹ ಕೆಲಸ ಮಾಡಬಹುದಾ... ಬುರ್ಖಾ ಬಿಚ್ಚು, ನಿನ್ನ ಹೆಸರೇನು ಏನು... ಕಾಫಿರ್ ಜೊತೆ ಕುಳಿತ್ತಿದ್ದೀಯಾ ಎಂದು ಪ್ರಶ್ನಿಸಿದ್ದಾನೆ. ಅಲ್ಲದೆ ಇದನ್ನು ವಿಡಿಯೋ ರೆಕಾರ್ಡ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. ಇನ್ನು ಯುವಕರ ಗುಂಪಿಗೆ ದಯವಿಟ್ಟು ಗಲಾಟೆ ಮಾಡಬೇಡಿ ಎಂದು ಯುವತಿ ಬೇಡಿಕೊಂಡಿದ್ದರೂ ಸುಮ್ಮನಾಗದ ಯುವಕರ ಪಡೆ ಕಮಿಟಿಯವರು ಬರ್ತಾರೆ ಇರು ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಸದ್ಯ ನೈತಿಕ ಪೊಲೀಸ್ಗಿರಿಯ ವಿಡಿಯೋವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Advertisement