ಅಂಬೇಡ್ಕರ್ ಪ್ರತಿಮೆ ಅನಾವರಣ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಕಾಂಗ್ರೆಸ್-BJP ನಾಯಕರು

ಭವಿಷ್ಯದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಮ್ ಅವರ ಪ್ರತಿಮೆಯನ್ನು ಸ್ಥಾಪಿಸುವ ಭರವಸೆಯನ್ನು ನೀಡಿದರು. ಬಿಜೆಪಿ ನಾಯಕರು ಸರ್ಕಾರದ ಕಿರುಪುಸ್ತಕವನ್ನು ಬಿಡುಗಡೆ ಮಾಡಿದರು.
ಬಿಜೆಪಿ-ಕಾಂಗ್ರೆಸ್ ನಾಯಕರು
ಬಿಜೆಪಿ-ಕಾಂಗ್ರೆಸ್ ನಾಯಕರು
Updated on

ತುಮಕೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯ ಅಂಗವಾಗಿ ಸೋಮವಾರ ತುಮಕೂರಿನ ಟೌನ್ ಹಾಲ್ ಮುಂಭಾಗದಲ್ಲಿ 12 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.

ಸಮಾರಂಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದ ನಾಯಕರು ಭಾಗವಹಿಸಿ, ಸೌಹಾರ್ದತೆ ಪ್ರದರ್ಶಿಸಿದರು. ದೇಶಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.

ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲಾದ ಮೊದಲ ಅಂಬೇಡ್ಕರ್ ಪ್ರತಿಮೆ ಇದಾಗಿದೆ. 1,000 ಕೆಜಿ ತೂಕದ ಪ್ರತಿಮೆಗೆ 39 ಲಕ್ಷ ರೂ. ದೇಣಿಗೆ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಮಾರಂಭವನ್ನು ಉದ್ಘಾಟನೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು, ಭವಿಷ್ಯದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಮ್ ಅವರ ಪ್ರತಿಮೆಯನ್ನು ಸ್ಥಾಪಿಸುವ ಭರವಸೆಯನ್ನು ನೀಡಿದರು. ಬಿಜೆಪಿ ನಾಯಕರು ಸರ್ಕಾರದ ಕಿರುಪುಸ್ತಕವನ್ನು ಬಿಡುಗಡೆ ಮಾಡಿದರು.

ಬಿಜೆಪಿ-ಕಾಂಗ್ರೆಸ್ ನಾಯಕರು
ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್, ದೇಶದಲ್ಲೇ ಅತ್ಯಂತ ಎತ್ತರದ ಪ್ರತಿಮೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರಾದ ಸೋಮಣ್ಣ, ಶಾಸಕರಾದ ಜಿ. ಬಿ. ಜ್ಯೋತಿಗಣೇಶ್ ಮತ್ತು ಬಿ. ಸುರೇಶ್ ಗೌಡ ಅವರು ಕಾಂಗ್ರೆಸ್ ಸಚಿವರೊಂದಿಗೆ ಸಿದ್ದರಾಮಯ್ಯ ಸರ್ಕಾರದ ಐದು ಭರವಸೆಗಳ ಕುರಿತು - ನುಡಿದಂತೆ ನಡೆದಿದ್ದೆವೆ (ಕೊಟ್ಟ ಮಾತಿನಂತೆ ನಡೆದಿದ್ದೇವೆ) ಎಂಬ ಕಿರುಪುಸ್ತಕವನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಸಚಿವರಾದ ಕೆ. ಎನ್. ರಾಜಣ್ಣ, ಡಾ. ಎಚ್. ಸಿ. ಮಹದೇವಪ್ಪ ಮತ್ತು ಬೈರತಿ ಸುರೇಶ್ ಮತ್ತು ನವದೆಹಲಿಯಲ್ಲಿ ರಾಜ್ಯದ ವಿಶೇಷ ಪ್ರತಿನಿಧಿಯಾಗಿರುವ ಟಿ. ಬಿ. ಜಯಚಂದ್ರ ಕೂಡ ಭಾಗವಹಿಸಿದ್ದರು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com