
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಆರೋಪದ ಮೇಲೆ ಬಿಹಾರ ಮೂಲದ ರಿತೇಶ್ ಕುಮಾರ್ ಎನ್ಕೌಂಟರ್ ಪ್ರಕರಣವನ್ನು ರಾಜ್ಯ ಸರ್ಕಾರ ಮಂಗಳವಾರ ಸಿಐಡಿಗೆ ವಹಿಸಿದೆ.
ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದ ಬೆನ್ನಲ್ಲೇ ನಗರಕ್ಕೆ ಆಗಮಿಸಿದ ಅಧಿಕಾರಿಗಳು, ಹುಬ್ಬಳ್ಳಿ ಪೊಲೀಸರಿಂದ ಕಡತಗಳನ್ನು ಪಡೆದುಕೊಂಡಿದ್ದಾರೆ.
ಸಿಐಡಿ ಎಸ್. ಪಿ. ವೆಂಕಟೇಶ್ ನೇತೃತ್ವದಲ್ಲಿ ಡಿವೈಎಸ್ ಪಿ ಪುನೀತ್ ಕುಮಾರ್, ಇನ್ಸ್ ಸ್ಪೆಕ್ಟರ್ ಮಂಜನಾಥ್ ಅವರು ಇಂದು ನಗರಕ್ಕೆ ಆಗಮಿಸಿದ್ದು, ಪೊಲೀಸರಿಂದ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದರು. ನಂತರ ಪ್ರಕರಣಕ್ಕೆ ಸಂಬಂಧಿಸಿದ ಕಾಗದ ಪತ್ರಗಳನ್ನು ಹಾಗೂ ದಾಖಲೆಗಳನ್ನು ಹಸ್ತಾಂತರಿಸಿಕೊಂಡರು.
ಕಳೆದ ಏಪ್ರಿಲ್ 13 ರಂದು ಹುಬ್ಬಳ್ಳಿಯ ವಿಜಯನಗರ ಬಡಾವಣೆಯಲ್ಲಿ ಮನೆಯ ಕಂಪೌಂಡ್ನಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ರಿತೇಶ್ ಕುಮಾರ್ ಪುಸಲಾಯಿಸಿ ಕರೆದುಕೊಂಡು ಹೋಗಿದ್ದನು. ನಂತರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದನು.
ಪೊಲೀಸರು ಆರೋಪಿಯನ್ನು ಬಂಧಿಸಿ, ಸ್ಥಳ ಮಹಜರಿಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ರಿತೇಶ್ ಕುಮಾರ್ ಮೇಲೆ ಅಶೋಕ ನಗರ ಠಾಣೆಯ ಪಿಎಸ್ಐ ಅನ್ನಪೂರ್ಣ ಅವರು ಗುಂಡು ಹಾರಿಸಿದ್ದರು.
Advertisement