ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು.
ಒಕ್ಕಲಿಗರ ಸಂಘದ ನಾಯಕರು
ಒಕ್ಕಲಿಗರ ಸಂಘದ ನಾಯಕರು
Updated on

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿದ ವಿವಾದಾತ್ಮಕ ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ರಾಜ್ಯ ಒಕ್ಕಲಿಗರ ಸಂಘ ಈ ವರದಿ ಜಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು. ಒಂದು ವೇಳೆ ವರದಿ ಜಾರಿಗೊಳಿಸಿದರೆ ಸರ್ಕಾರ ಉಳಿಯುವುದಿಲ್ಲ ಮತ್ತು ಕರ್ನಾಟಕ ಬಂದ್​ ರೀತಿಯ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ಕಾಂತರಾಜು ಆಯೋಗದ ವರದಿ ಜಾರಿ ಮಾಡಲು ಹೊರಟಿದೆ. ಆದರೆ ಅದರ ವಿರುದ್ದ ಹೋರಾಟ ಮಾಡಲು ಒಕ್ಕಲಿಗ ಸಂಘದ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಮುಂದಿನ ಹಂತದಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಇಂದು ಚರ್ಚಿಸಲಾಗಿದೆ ಎಂದರು.

ಒಕ್ಕಲಿಗರ ಸಂಘದ ನಾಯಕರು
ಜಾತಿ ಜನಗಣತಿ ಜ್ವಾಲಾಗ್ನಿ: ವರದಿಗೆ 2 ಪ್ರಬಲ ಸಮುದಾಯ ತೀವ್ರ ವಿರೋಧ; ರಾಜಕೀಯ ಧ್ರುವೀಕರಣ ಸಾಧ್ಯತೆ!

ಕಾಂತರಾಜು ಅವರ ವರದಿ ಆರೋಗ್ಯಕರವಾಗಿಲ್ಲ. 10 ವರ್ಷಗಳ ಹಿಂದೆ ಸಮೀಕ್ಷೆ ಮಾಡಿದ ವರದಿಯನ್ನ ಈಗ ಜಾರಿಗೊಳಿಸಲು ಮುಂದಾಗಿದೆ. ಈ ವರದಿಯಲ್ಲಿ ಒಕ್ಕಲಿಗ ಜನಾಂಗವನ್ನ ಕೇವಲ 61ಲಕ್ಷ ತೋರಿಸಲಾಗಿದೆ ಎಂದರು.

ರಾಜ್ಯದ 224 ಕ್ಷೇತ್ರದಲ್ಲಿ ಒಕ್ಕಲಿಗರು ಕೇವಲ 61ಲಕ್ಷ ಮಾತ್ರ ಇರಲು ಸಾಧ್ಯವೇ ಇಲ್ಲ. ಒಂದೊಂದು ತಾಲೂಕಲ್ಲೂ 60 ಸಾವಿರದಿಂದ 1ಲಕ್ಷಕ್ಕೂ ಹೆಚ್ಚು ಒಕ್ಕಲಿಗ ಸಮುದಾಯದ ಜನರಿದ್ದಾರೆ. ಆದರೆ ಈ ವರದಿಯಲ್ಲಿ ನಮ್ಮ ಜನಾಂಗವನ್ನ 6ನೇ ಸ್ಥಾನದಲ್ಲಿ ಇರಿಸಲಾಗಿದೆ. ಇದು ಬೇರೆ ಜನಾಂಗಕ್ಕೆ ಮೀಸಲಾತಿ ನೀಡುವ ಉದ್ದೇಶದಿಂದ ಮಾಡುವ ಹುನ್ನಾರ. ಹೀಗಾಗಿ ನಾವು ಕರ್ನಾಟಕ ಬಂದ್ ಮಾಡುವುದರ ಮೂಲಕ ಹೋರಾಟ ಮಾಡಬೇಕಾಗುತ್ತೆ. ಜಾತಿ ಗಣತಿ ವರದಿಯಲ್ಲಿ ಸಾಕಷ್ಟು ಜನಾಂಗಕ್ಕೆ ಅನ್ಯಾಯವಾಗಿದೆ. ಹೀಗಾಗಿ ಇದನ್ನು ಹಿಂಪಡೆಯಬೇಕು ಮತ್ತು ಮರುಪರಿಶೀಲನೆ ಮಾಡಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com