ಸಾರಿಗೆ ನಿಗಮಗಳ ಕಾರ್ಮಿಕರ ಬೇಡಿಕೆಗಳ ಕುರಿತು ಶೀಘ್ರದಲ್ಲೇ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಕುರಿತಾಗಿ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಯಾವತ್ತೂ ದುಡಿಯುವ ವರ್ಗದ ಪರವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಕುರಿತಾಗಿ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದರು.

ಈ ವೇಳೆ ಸಾರಿಗೆ ನಿಗಮಗಳ ಕಾರ್ಮಿಕರು, ದಿನಾಂಕ 01/01/24 ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳ ಮತ್ತು ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನವನ್ನು ಸಾರಿಗೆ ನೌಕರರಿಗೂ ಜಾರಿಗೊಳಿಸಬೇಕು.

01.01.20ರಿಂದ ಜಾರಿಯಾಗಬೇಕಾದ ವೇತನ ಪರಿಷ್ಕರಣೆ 01.03.23ರಿಂದ ಅನುಷ್ಠಾನಕ್ಕೆ ಬಂದಿದ್ದು, 38 ತಿಂಗಳ ಬಾಕಿ ಹಣವನ್ನು ಪಾವತಿಸಬೇಕು. ಈ ಹಿಂದೆ 2020 ಮತ್ತು 2021ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು. ಸಾರಿಗೆ ನಿಗಮದ ವಿದ್ಯುತ್ ಬಸ್‌ ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು. ಸದರಿ ಬಸ್‌ ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ದತಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ
ಮುಷ್ಕರ ನಿರತ ಲಾರಿ ಮಾಲೀಕರ ಜೊತೆಗಿನ ಸಿಎಂ ಸಂಧಾನ ಮಾತುಕತೆ ವಿಫಲ! ನಾಳೆಯಿಂದ ಪ್ರತಿಭಟನೆ ತೀವ್ರ

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಯಾವತ್ತೂ ದುಡಿಯುವ ವರ್ಗದ ಪರವಾಗಿರಲಿದೆ. ಹಿಂದಿನ ಸರ್ಕಾರ ಸುಮಾರು 40 ಸಾವಿರ ಕೋಟಿ ರೂ. ಬಾಕಿ ಬಿಲ್ಲುಗಳನ್ನು ಉಳಿಸಿ ಹೋಗಿದೆ. ಇದು ಸರ್ಕಾರದ ಮೇಲೆ ಆರ್ಥಿಕ ಹೊರೆ ಉಂಟು ಮಾಡಿದೆ. ಸರ್ಕಾರದ ಇತಿಮಿತಿಯ ಒಳಗಾಗಿ ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಸೇರಿದಂತೆ ಎಲ್ಲಾ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಬೇಡಿಕೆಗಳ ಈಡೇರಿಕೆ ಕುರಿತಾಗಿ ಇನ್ನೊಮ್ಮೆ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆಯನ್ನು ಆದಷ್ಟು ಬೇಗನೆ ಕರೆಯಲಾಗುವುದು. ಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸಂಸ್ಥೆಗೆ ರೂ. 4ಸಾವಿರ ಕೋಟಿಯಷ್ಟು ಮೊತ್ತವನ್ನು ಹಿಂದಿನ ಸರ್ಕಾರ ಬಾಕಿ ಉಳಿಸಿ ಹೋಗಿತ್ತು. ಸಂಸ್ಥೆಯನ್ನು ಬಲಪಡಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ನೌಕರರಿಗೆ ನಗದು ರಹಿತ ಚಿಕಿತ್ಸೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ವರ್ಷದ ಬಜೆಟ್ ನಲ್ಲಿ 350 ಕೋಟಿ ಸಾಲವನ್ನು ಪಡೆಯಲು ಸಂಸ್ಥೆಗೆ ಅನುಮತಿ ನೀಡಲಾಗಿದೆ. ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಲು 2 ಸಾವಿರ ಬಸ್‌ಗಳನ್ನು ಹೊಸದಾಗಿ ಖರೀದಿ ಮಾಡಲಾಗುವುದು. ಚಾಲಕ ಮತ್ತು ನಿರ್ವಾಹಕರ ಮಾದರಿಯಲ್ಲಿ ಮೆಕ್ಯಾನಿಕ್ ಗಳ ನೇಮಕಾತಿಗೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com