ಮುಡಾ ಹಗರಣ ಬಗ್ಗೆ ಸಿಬಿಐ ತನಿಖೆ ಕೋರಿ ಅರ್ಜಿ: ಸಿಎಂ ಸಿದ್ದರಾಮಯ್ಯ, ಅವರ ಪತ್ನಿಗೆ ಹೈಕೋರ್ಟ್ ನೋಟಿಸ್

ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಇತರರಿಗೆ ನೋಟಿಸ್ ನೀಡಿದೆ.
High Court, cm Siddaramaiah
ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ದೇಶನ ಕೋರಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿ.ಎಂ ಅವರಿಗೆ 14 ನಿವೇಶನಗಳನ್ನು ಅಕ್ರಮ ಹಂಚಿಕೆ ಬಗ್ಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಈಗಾಗಲೇ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಆದರೆ ಲೋಕಾಯುಕ್ತ ಪಾರದರ್ಶಕ ತನಿಖೆ ನಡೆಸಿಲ್ಲ ಎಂದು ಆರೋಪಿಸಿದ ಸ್ನೇಹಮಯಿ ಕೃಷ್ಣ ಅವರು, ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆ(ಸಿಬಿಐ)ಗೆ ವರ್ಗಾಯಿಸಬೇಕೆಂಬ ಮನವಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಫೆಬ್ರವರಿ 7 ರಂದು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

High Court, cm Siddaramaiah
ಮುಡಾ ಪ್ರಕರಣ: ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಕೆ

ಇಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಇತರರಿಗೆ ನೋಟಿಸ್ ನೀಡಿದ್ದು, ಏಪ್ರಿಲ್ 28ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಆರೋಪಿಗಳ ಪರವಾಗಿ ವರದಿ ಪಡೆಯಲು ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ಸಂಸ್ಥೆಯ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com