
ಬೆಂಗಳೂರು: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದು, ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಇದನ್ನು ಖಂಡಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಜಾರಿ ನಿರ್ದೇಶನಾಲಯ (ED) ಕಚೇರಿಯ ಎದುರು ಬುಧವಾರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.
ನ್ಯಾಷನಲ್ ಹೆರಾಲ್ಡ್‌ನ ಆಸ್ತಿಗಳನ್ನು ಅನಿಯಂತ್ರಿತ ಮತ್ತು ಅನ್ಯಾಯವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ಧ "ರಾಜಕೀಯ ಪ್ರೇರಿತ ಆರೋಪಪಟ್ಟಿಗಳನ್ನು" ಸಲ್ಲಿಸಲಾಗಿದೆ ಎಂದು ರೋಪಿಸಿದೆ.
ಇದನ್ನು ಇಡಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುತ್ತಿದ್ದು, ಪಕ್ಷದ ಶಾಸಕರು, ಸಂಸದರು ಮತ್ತು ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದೆ. ಆದರೆ, ಕಲಬುರಗಿಯಲ್ಲಿ ಈ ಮೊದಲೇ ನಿಗದಿಪಡಿಸಿರುವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿದುಬಂದಿದೆ.
ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡಿ, ಕಾನೂನು ಕ್ರಮದ ವೇಷದಲ್ಲಿ ನಡೆಸಲಾಗುತ್ತಿರುವ ದ್ವೇಷ ರಾಜಕೀಯವಲ್ಲದೆ ಬೇರೇನೂ ಅಲ್ಲ. ಪ್ರಜಾಪ್ರಭುತ್ವ ಸಂಸ್ಥೆಗಳು ಮತ್ತು ವಿರೋಧ ಪಕ್ಷದ ಧ್ವನಿಗಳ ಮೇಲೆ "ವ್ಯವಸ್ಥಿತ ದಾಳಿ ನಡೆಸಲಾಗುತ್ತಿದ್ದು, ಇದರಿಂದ ಪಕ್ಷ ಮೌನವಾಗಿರುವುದಿಲ್ಲ ಎಂದು ಹೇಳಿದ್ದಾರೆ.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಬೆದರಿಕೆ ಮತ್ತು ಕಾನೂನು ಕಿರುಕುಳದ ಮೂಲಕ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಮತ್ತು ವಿರೋಧ ಪಕ್ಷಗಳನ್ನು ಮೌನವಾಗಿಸಲು ಕೇಂದ್ರ ಸಂಸ್ಥೆಗಳನ್ನು ಅಸ್ತ್ರವಾಗಿ ಬಳಸುತ್ತಿದೆ. ಇದು ಮೋದಿ ಸರ್ಕಾರದ ಸೇಡಿನ ರಾಜಕೀಯವಾಗಿದೆ ಎಂದು ತಿಳಿಸಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾತನಾಡಿ, ಇದು ಅಖಿಲ ಭಾರತ ಪ್ರತಿಭಟನೆಯಾಗಲಿದೆ. ಅಧಿಕಾರದ ದುರುಪಯೋಗ ಮತ್ತು ಮೋದಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧ ದೇಶಾದ್ಯಂತ ಇಡಿ ಕಚೇರಿಗಳ ಹೊರಗೆ ನಾವು ಪ್ರತಿಭಟನೆ ನಡೆಸುತ್ತೇವೆ. ಎಲ್ಲಾ ನಾಯಕರು, ಪಕ್ಷದ ಪದಾಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದ್ದಾರೆ.
Advertisement