
ಬೆಂಗಳೂರು: ಖಾಸಗಿ ಪುನರ್ವಸತಿ ಕೇಂದ್ರ(REHAB CENTER)ವೊಂದರಲ್ಲಿ ರೋಗಿಯೊಬ್ಬರ ಮೇಲೆ ಅಲ್ಲಿನ ಸಿಬ್ಬಂದಿ ಮನಸೋ ಇಚ್ಛೆ ಥಳಿಸಿರುವ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದೆ.
ಪುನರ್ವಸತಿ ಕೇಂದ್ರದವಾರ್ಡನ್ ಬಟ್ಟೆ ಒಗೆಯಲು ಮತ್ತು ಶೌಚಾಲಯ ಸ್ವಚ್ಛಗೊಳಿಸಲು ನಿರಾಕರಿಸಿದ ಕಾರಣ, ಸಿಬ್ಬಂದಿ ರೋಗಿಯೊಬ್ಬನನ್ನು ಥಳಿಸಿದ್ದಾರೆ.
ಬೆಂಗಳೂರಿನ ಹೊರವಲಯದಲ್ಲಿರುವ ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಪುನರ್ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ.
ವೈರಲ್ ಆಗಿರುವ ವಿಡಿಯೋ ಪ್ರಕಾರ, ರೋಗಿಯನ್ನು ಕೋಣೆಯಲ್ಲಿ ಮೂಲೆಗೆ ಸೇರಿಸಿಕೊಂಡು ವ್ಯಕ್ತಿಯೊಬ್ಬ ಕೋಲಿನಿಂದ ನಿರಂತರವಾಗಿ ಹೊಡೆಯುತ್ತಿದ್ದಾನೆ. ಆದರೆ ಇದೇ ಸಂದರ್ಭದಲ್ಲಿ ಅವನ ಪಕ್ಕದ್ದಲೇ ಇದ್ದ ಇತರರು ಪಕ್ಕದಲ್ಲಿ ಸುಮ್ಮನೆ ನೋಡುತ್ತಿದ್ದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ, ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ದೃಢಪಡಿಸಿದರು.
ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
Advertisement