ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬಕ್ಕೆ ಯಾವುದೇ ರೀತಿಯಲ್ಲೂ ಲಾಭವಾಗಿಲ್ಲ- ಡಿ.ಕೆ ಶಿವಕುಮಾರ್

ಇದು ಕಾಂಗ್ರೆಸ್ ಪಕ್ಷದ ಆಸ್ತಿ ಮತ್ತು ಅವರು ಪಕ್ಷದ ಮುಖ್ಯಸ್ಥರು, ಆದ್ದರಿಂದ ಅವರ ಹೆಸರು ಉಲ್ಲೇಖವಾಗಿದೆ. ಇದರಲ್ಲಿ ತಪ್ಪೇನಿದೆ?
DK Shivakumar
ಡಿ.ಕೆ.ಶಿವಕುಮಾರ್
Updated on

ಕಲಬುರಗಿ: ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿಯ ಯಾವುದೇ ವಿಚಾರಗಳಿಗೆ ಸರಿಯಾದ ಆಧಾರವಿಲ್ಲ. ಇದು ಅನ್ಯಾಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿರುವ ಬಗ್ಗೆ ಕೇಳಿದಾಗ, "ಈ ಪ್ರಕರಣದಲ್ಲಿ ಯಾವುದೇ ರೀತಿಯಲ್ಲಿಯೂ ಗಾಂಧಿ ಕುಟುಂಬಕ್ಕೆ ಲಾಭವಾಗಿಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಮತ್ತು ಅವರು ಪಕ್ಷದ ಮುಖ್ಯಸ್ಥರು, ಆದ್ದರಿಂದ ಅವರ ಹೆಸರು ಉಲ್ಲೇಖವಾಗಿದೆ. ಇದರಲ್ಲಿ ತಪ್ಪೇನಿದೆ? ಇದನ್ನು ಕೇವಲ ರಾಜಕೀಯ ದ್ವೇಷಕ್ಕಾಗಿ ಮಾಡಲಾಗುತ್ತಿದೆ" ಎಂದರು.

ಕಲಬುರಗಿಯ ಕೆಸಿಟಿ ಕಾಲೇಜು ಕ್ಯಾಂಪಸ್ ನಲ್ಲಿ ಬುಧವಾರ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಿಮ್ಮ ಜೀವನ ನಡೆಯಲು ನಿಮಗೆ ಉದ್ಯೋಗ ಬೇಕು ನಿಜ. ಆದರೆ ನೀವು ಉದ್ಯೋಗ ಮಾಡುವುದಕ್ಕಿಂತ ನೀವೇ ಹತ್ತಾರು ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯುವತ್ತ ಗಮನಹರಿಸಿ. ಆಗ ಮಾತ್ರ ನೀವು ಯಶಸ್ವಿಯಾಗಲು ಸಾಧ್ಯ. ಉದ್ಯೋಗ ಸಿಗಲಿಲ್ಲ ಎಂದು ನೀವು ಎಂದಿಗೂ ಎದೆಗುಂದಬೇಡಿ. ಜೀವನದಲ್ಲಿ ಒಂದಲ್ಲಾ ಒಂದು ಅವಕಾಶ ಸಿಕ್ಕೇ ಸಿಗುತ್ತದೆ. ಸಿಕ್ಕ ಅವಕಾಶ ಸರಿಯಾಗಿ ಬಳಸಿಕೊಳ್ಳಿ.

ಕೌಶಲ್ಯ ಆಧಾರಿತ ಉದ್ಯೋಗ ಮಾಡಿದರೆ ಉತ್ತಮ ಜೀವನ ಸಾಗಿಸಬಹುದು. ನೀವು ಯಾವುದೇ ಕೆಲಸ ಮಾಡಿದರು ಆತ್ಮಗೌರವ ಇರಬೇಕು. ಇಲ್ಲಿ ಅನೇಕರು ಉದ್ಯೋಗಕ್ಕಾಗಿ ಬಂದಿದ್ದೀರಿ. ನೀವು ನಿಮ್ಮ ಜೀವನದಲ್ಲಿ ಸಾವಿರಾರು ಮೆಟ್ಟಿಲು ಹತ್ತುವ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿ. ನಿಮ್ಮ ಜೀವನದಲ್ಲಿ ಅನುಭವ ಸಿಕ್ಕಷ್ಟು ನಿಮ್ಮ ಬದುಕು, ಭವಿಷ್ಯ ಗಟ್ಟಿಯಾಗುತ್ತದೆ. ನಿಮ್ಮ ಬದುಕಿಗೆ ಉತ್ತಮ ಅನುಭವ ಪಡೆದುಕೊಳ್ಳಿ” ಎಂದು ತಿಳಿಸಿದರು.

DK Shivakumar
ಕಲಬುರಗಿ: ಕೇಂದ್ರ, ರಾಜ್ಯ ಸರ್ಕಾರ ಒಟ್ಟಾಗಿ ನಿರುದ್ಯೋಗ ಸಮಸ್ಯೆ ನಿವಾರಿಸಬೇಕು- ಸಿಎಂ ಸಿದ್ದರಾಮಯ್ಯ

ಈ ಭಾಗದ ಯುವಕರಿಗೆ ಉದ್ಯೋಗ ದೊರಕಿಸಿಕೊಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ನಮ್ಮ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಎಲ್ಲಾ ವರ್ಗದ ರಕ್ಷಣೆ ಮಾಡಲು ಕಾರ್ಯಕ್ರಮ ರೂಪಿಸಿಕೊಂಡು ಬಂದಿದೆ. ಕೋವಿಡ್ ಸಮಯದಲ್ಲಿ ಈ ಭಾಗದ ಕಾರ್ಮಿಕರು ಬೆಂಗಳೂರಿನಲ್ಲಿ ನನ್ನನ್ನು ಭೇಟಿ ಮಾಡಿ ಆಗಿನ ಬಿಜೆಪಿ ಸರ್ಕಾರ ಬಸ್ ದರವನ್ನು ಮೂರು ಪಟ್ಟು ಹೆಚ್ಚಿಸಿ ವಸೂಲಿ ಮಾಡುತ್ತಿದೆ ಎಂದು ದೂರು ನೀಡಿದರು.

ಆಗ ನಮ್ಮ ನಾಯಕರ ಜತೆ ಚರ್ಚಿಸಿ ಕೆಪಿಸಿಸಿ ವತಿಯಿಂದ ರೂ. 1 ಕೋಟಿ ಹಣವನ್ನು ಸಾರಿಗೆ ಇಲಾಖೆಗೆ ಕೊಡಲು ಮುಂದಾದೆ. ಆಗ ಸರ್ಕಾರ ಒತ್ತಡಕ್ಕೆ ಮಣಿದು ಎಲ್ಲಾ ಕಾರ್ಮಿಕರಿಗೂ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಯಿತು” ಎಂದು ಹೇಳಿದರು.

“ಇದು ಐತಿಹಾಸಿಕ ಕಾರ್ಯಕ್ರಮ. ಕಲ್ಯಾಣ ಕರ್ನಾಟಕದ 26 ಸಾವಿರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡಿಸಲು ಮುಂದಾಗಿರುವ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಅವರ ತಂಡಕ್ಕೆ ಸರ್ಕಾರ ಪರವಾಗಿ ಹಾಗೂ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ

ಕೌಶಲ್ಯ ದೀಪವಿದ್ದಂತೆ. ನೀವು ಒಮ್ಮೆ ಕಲಿತರೆ ಜೀವನ ಪರ್ಯಂತ ನಿಮ್ಮ ಜೀವನದ ದಾರಿ ಬೆಳಗುತ್ತಿರುತ್ತದೆ. ಈ ಇಲಾಖೆಯ ಜವಾಬ್ದಾರಿ ವಹಿಸಿರುವ ಸಚಿವರು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ” ಎಂದು ಶ್ಲಾಘಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com