ನಾನು ಜಾತಿ ಗಣತಿ ವರದಿ ನೋಡಿಲ್ಲ, ಸರ್ಕಾರ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ತೀರ್ಮಾನಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ವಿವಿಧ ಸಮುದಾಯಗಳು, ವಿಶೇಷವಾಗಿ ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತರು ಜಾತಿ ಗಣತಿ ವರದಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ಕಲಬುರಗಿ: ಕರ್ನಾಟಕ ಸರ್ಕಾರವು 'ಜಾತಿ ಗಣತಿ' ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದಾರೆ.

ವರದಿ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 'ತಾನು ವರದಿಯನ್ನು ಇನ್ನೂ ನೋಡಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು, ಪ್ರತಿಯೊಂದು ರಾಜ್ಯವೂ ತನ್ನದೇ ಆದ ಕೆಲಸವನ್ನು ಮಾಡುತ್ತದೆ. ಇದನ್ನು ಕೇಂದ್ರ ಸರ್ಕಾರ ಮಾಡಿಲ್ಲ. ರಾಜ್ಯ ಸರ್ಕಾರವು ಸಂಪುಟದಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತದೆ. ಈ ವಿಷಯವನ್ನು ರಾಜ್ಯ ಸರ್ಕಾರಕ್ಕೆ ಬಿಡಲಾಗಿದೆ ಎಂದು ಖರ್ಗೆ ಸುದ್ದಿಗಾರರಿಗೆ ತಿಳಿಸಿದರು.

ವರದಿ ವ್ಯಕ್ತವಾಗುತ್ತಿರುವ ವಿರೋಧದ ಬಗ್ಗೆ ಕೇಳಿದಾಗ, ಅವರಿಂದ ವಿರೋಧ ಇರಬಹುದು. ನಾನು ನನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟದ ವಿಶೇಷ ಸಭೆ ಗುರುವಾರ ವಿವಾದಾತ್ಮಕ 'ಜಾತಿ ಜನಗಣತಿ'ಯ ಬಗ್ಗೆ ಚರ್ಚಿಸಲಿದೆ' ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ
'ಜಾತಿ ಗಣತಿ ವರದಿಗೆ ನನ್ನ ಸಂಪೂರ್ಣ ಒಪ್ಪಿಗೆಯಿದೆ': ವಿರೋಧದ ನಡುವೆ ಸಚಿವ ದಿನೇಶ್ ಗುಂಡೂರಾವ್

ವಿವಿಧ ಸಮುದಾಯಗಳು, ವಿಶೇಷವಾಗಿ ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತರು ಜಾತಿ ಗಣತಿ ವರದಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನು 'ಅವೈಜ್ಞಾನಿಕ' ಎಂದು ಕರೆದಿದ್ದು, ವರದಿಯನ್ನು ತಿರಸ್ಕರಿಸಬೇಕು ಮತ್ತು ಹೊಸ ಸಮೀಕ್ಷೆಯನ್ನು ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಸಮಾಜದ ವಿವಿಧ ವರ್ಗಗಳಿಂದ ಆಕ್ಷೇಪಣೆಗಳು ವ್ಯಕ್ತವಾಗಿವೆ ಮತ್ತು ಆಡಳಿತಾರೂಢ ಕಾಂಗ್ರೆಸ್‌ನೊಳಗಿಂದಲೂ ಈ ವರದಿ ವಿರುದ್ಧ ವಿರೋಧದ ಧ್ವನಿಗಳು ಕೇಳಿಬರುತ್ತಿವೆ.

ಮಲ್ಲಿಕಾರ್ಜುನ ಖರ್ಗೆ
ಹೀಗೆ ಕಿತ್ತಾಡಿಕೊಳ್ಳುತ್ತಿದ್ದರೆ ಮೋದಿ ನಿಮ್ಮ ಸರ್ಕಾರ ಬೀಳಿಸ್ತಾರೆ, ಎಚ್ಚರವಾಗಿರಿ: ವೇದಿಕೆ ಮೇಲೆ ಸಿದ್ದರಾಮಯ್ಯ, ಡಿಕೆಶಿ​ಗೆ ಖರ್ಗೆ ಎಚ್ಚರಿಕೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com