ರಾಯಚೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಸಿಡಿಲು ಬಡಿದು ಇಬ್ಬರು ಸಾವು

ರಾಯಚೂರು ತಾಲ್ಲೂಕಿನ ಉಡಮಗಲ್ ಹಾಗೂ ಮರ್ಚಾಟ್ಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ರಾಯಚೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಶುಕ್ರವಾರ ರಾಯಚೂರು ಜಿಲ್ಲೆಯಲ್ಲೂ ಹಲವು ಕಡೆ ಭಾರಿ ಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಆಗುವ ಮೂಲಕ ಬಿಸಿಲಿಗೆ ಕಾದು ಕೆಂಡದಂತಾಗಿದ್ದ ಇಳೆ ತಂಪಾಗುವಂತೆ ಮಾಡಿದೆ.

ಇಂದು ಮಧ್ಯಾಹ್ನ 3:20 ರಿಂದ 4 ಗಂಟೆಯವರೆಗೆ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ. ನಗರದಲ್ಲಿ ವರ್ಷದ ಮೊದಲ ಮಳೆ ಸುರಿಯಿತು. ಮಸ್ಕಿ, ಹಟ್ಟಿ ಚಿನ್ನದ ಗಣಿ, ಲಿಂಗಸುಗೂರಲ್ಲಿ ಸಾಧಾರಣ ಮಳೆಯಾಗಿದೆ.

ಇನ್ನು ರಾಯಚೂರು ತಾಲ್ಲೂಕಿನ ಉಡಮಗಲ್ ಹಾಗೂ ಮರ್ಚಾಟ್ಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ
ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಏಪ್ರಿಲ್ 17 ವರೆಗೆ ಗುಡುಗು ಸಹಿತ ಭಾರಿ ಮಳೆ!

ಮೃತರನ್ನು ಉಡಮಗಲ್ ನ ಮಲ್ಲಮ್ಮ(50) ಹಾಗೂ ಮರ್ಚಾಟ್ಹಾಳದ ಹನುಮಂತ(55) ಎಂದು ಗುರುತಿಸಲಾಗಿದೆ.

ಮಲ್ಲಮ್ಮ ಅವರು ಗ್ರಾಮದ ಹೊರವಲಯದಲ್ಲಿ ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com