ಮಾಜಿ ಡಾನ್ ಮುತ್ತಪ್ಪ ರೈ ಪುತ್ರನಿಗೆ ಗುಂಡೇಟು: ಕೂದಲೆಳೆ ಅಂತರದಲ್ಲಿ ರಿಕ್ಕಿ ರೈ ಪಾರು!

ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ.

Ricky rai
ರಿಕ್ಕಿ ರೈ
Updated on

ಬೆಂಗಳೂರು: ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ನಡೆದಿದೆ.

ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ. ಈ ವೇಳೆ ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ.

ಎರಡು ದಿನದ ಹಿಂದಷ್ಟೇ ರಷ್ಯಾದಿಂದ ರಿಕ್ಕಿ ರೈ ವಾಪಸ್ ಆಗಿದ್ದರು. ರಿಯಲ್ ಎಸ್ಟೇಟ್ ಬಿಸಿನೆಸ್ ನಲ್ಲಿ ಆಕ್ಟಿವ್ ಆಗಿದ್ದರು. ಕಾರು ಚಾಲಕ ರಾಜುನಿಂದ ಘಟ‌ನೆ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಬಿಡದಿ ಇನ್ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Ricky rai
ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ದಾಳಿ: ಮಾಜಿ ಡಾನ್ ಪುತ್ರನಿಗೆ ಡ್ರಗ್ಸ್ ನಂಟು?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com