ಜನಿವಾರ ತೆಗೆಸಿ CET ಪರೀಕ್ಷೆ: ಪ್ರಕರಣ ದಾಖಲು; ಇಬ್ಬರು ಹೋಮ್ ಗಾರ್ಡ್ ಅಮಾನತು!

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಹೇಳಿದ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿತರಾದ ಇಬ್ಬರು ಹೋಮ್ ಗಾರ್ಡ್ಸ್ ಗಳನ್ನು ಅಮಾನತು ಮಾಡಲಾಗಿದೆ.
Brahmins outrages
ಬ್ರಾಹ್ಮಣ ಸಮುದಾಯದಿಂದ ದೂರು
Updated on

ಶಿವಮೊಗ್ಗ: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಪಿಯು ಕಾಲೇಜಿನ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.

ಬ್ರಾಹ್ಮಣ ಸಭಾ ದೂರು:

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಹೇಳಿದ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿತರಾದ ಇಬ್ಬರು ಹೋಮ್ ಗಾರ್ಡ್ಸ್ ಗಳನ್ನು ಅಮಾನತು ಮಾಡಲಾಗಿದೆ. ರಾಜ್ಯ ಬ್ರಾಹ್ಮಣ ಸಭಾದ ನಟರಾಜ್ ಭಾಗವತ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

FIR ದಾಖಲು

ಪೋಲೀಸರ ಪ್ರಕಾರ, ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 115 (2) (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 299 (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶ), 351 (1) (ಅಪರಾಧ ಬೆದರಿಕೆ), 352 (ಉದ್ದೇಶಪೂರ್ವಕವಾಗಿ ನಿಂದನೆ ಮತ್ತು 5 ಶಾಂತಿಗೆ ಧಕ್ಕೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಘಟನೆಯ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದರೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸಿಲ್ಲ ಹಾಗೂ ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ಜನಿವಾರ ತೆಗೆಯುವಂತೆ ಹೇಳಿರುವುದು ವಿದ್ಯಾರ್ಥಿಗಳ ಹಾಗೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಇಬ್ಬರು ಗೃಹ ರಕ್ಷಕರ ಅಮಾನತು

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಸೂಚನೆ ಮೇರೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಬ್ಬರು ಗೃಹ ರಕ್ಷಕರನ್ನು ಅಮಾನತುಗೊಳಿಸಿದ್ದು, ಸಿಇಟಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಾಗಿದೆ.

ಏನಿದು ವಿವಾದ: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತದೆ. ಬುಧವಾರ ಆದಿಚುಂಚನಗಿರಿ ಪಿಯು ಕಾಲೇಜು ಪರೀಕ್ಷಾ ಕೇಂದ್ರದ ಭದ್ರತಾ ಸಿಬ್ಬಂದಿ ಮೂವರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಹೇಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಯೊಬ್ಬ ಜನವಾರ ತೆಗೆಯಲು ನಿರಾಕರಿಸಿದರೆ, ಮತ್ತಿಬ್ಬರು ಜನಿವಾರ ತೆಗೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ್ದರು.

ಘಟನೆಯು ವಿವಾದಕ್ಕೆ ಎಡೆ ಮಾಡಿಕೊಟ್ಟ ನಂತರ ತಪಿತಸ್ಥರ ​​ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಭರವಸೆ ನೀಡಿದ್ದಾರೆ.

Brahmins outrages
ಜನಿವಾರ ವಿವಾದ: ಯಾವ ಇಲಾಖೆಯೂ ಇಂತಹ ನಿರ್ದೇಶನ ಕೊಟ್ಟಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ; ಶೋಕಾಸ್ ನೋಟಿಸ್ ಜಾರಿ- ರಾಜ್ಯ ಸರ್ಕಾರ

ಪರೀಕ್ಷಾ ಕೇಂದ್ರದ ಸಿಬ್ಬಂದಿ ಸ್ಪಷ್ಟನೆ:

ಪ್ರಾಥಮಿಕ ವಿಚಾರಣೆ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಶರ್ಟ್ ಅಥವಾ ಜನಿವಾರ ತೆಗೆಯುವಂತೆ ಹೇಳಿಲ್ಲ. ನಿಯಮಾವಳಿ ಪ್ರಕಾರ ಕೈಯಲ್ಲಿ ಕಟ್ಟಲಾಗಿದ್ದ ಕಾಶಿದಾರ ತೆಗೆಯುವಂತೆ ಹೇಳಿದ್ದೇವೆ ಎಂದು ಪರೀಕ್ಷಾ ಕೇಂದ್ರದದಲ್ಲಿ ನಿಯೋಜಿತರಾಗಿದ್ದ ಸಿಬ್ಬಂದಿ ವಿಚಾರಣೆ ವೇಳೆ ತಿಳಿಸಿದ್ದು, ಆರೋಪಗಳು ಕುರಿತು ಪರಿಶೀಲಿಸಬೇಕಾಗಿದೆ.ಅದಕ್ಕಾಗಿ ವಿವರವಾದ ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com