ರಾಜ್ಯ
ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಬರ್ಬರ ಕೊಲೆ
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೊಲೆ ಆಗಿದೆ ಎಂದು ವರದಿಯಾಗಿದೆ.
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೊಲೆ ಆಗಿದೆ ಎಂದು ವರದಿಯಾಗಿದೆ. ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿ ಅವರೇ ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಿಹಾರದ ಚಂಪಾರಣ್ ಮೂಲದವರಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು. ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
ಓಂ ಪ್ರಕಾಶ್ ಅವರು ಕರ್ನಾಟಕ ಗೃಹರಕ್ಷಕದಳ, ಅಗ್ನಿಶಾಮಕದಳಗಳಲ್ಲಿ ಮಹಾನಿರ್ದೇಶಕರಾಗಿದ್ದ ಅವರು, 2015ರಿಂದ 2017ರವರೆಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.


