ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್- ಈಶ್ವರ ಖಂಡ್ರೆ

ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ
 Ishwar Khandre
ಈಶ್ವರ ಖಂಡ್ರೆ
Updated on

ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ.

ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದ್ದು, ಇದು ನೋವಿನ ಸಂಗತಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇಂತಹ ಒಂದು ಘಟನೆ ನಡೆಯಬಾರದಾಗಿತ್ತು. ಈ ಬಗ್ಗೆ ತಮ್ಮ ಗಮನಕ್ಕೆ ಬಂದ ಕೂಡಲೇ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ, ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವೂ ಆಗಿದೆ ಎಂದರು.

 Ishwar Khandre
CET Exam ವೇಳೆ ಜನಿವಾರ ಬಿಚ್ಚಿಸಿದ ಪ್ರಕರಣ: ಸಾಯಿ ಸ್ಪೂರ್ತಿ ಕಾಲೇಜ್ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು!

ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬುದು ಎಲ್ಲರ ಭಾವನೆ, ಹೀಗಾಗಿ ಭಾಲ್ಕಿಯ ತಮ್ಮ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟ್ ನೀಡುವುದಾಗಿ ಭರವಸೆ ನೀಡಿದರು.

ಸುಚಿವ್ರತ್ ಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಅವಕಾಶವಿದೆಯೇ ಎಂಬ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಈಶ್ವರ ಖಂಡ್ರೆ ವಿದ್ಯಾರ್ಥಿಗೆ ಕಾಮಡ್ ಕೆ ಪರೀಕ್ಷೆ ಬರೆಯಲೂ ವಿದ್ಯಾರ್ಥಿಗೆ ಅವಕಾಶವಿದೆ. ಆ ಸೀಟು ಲಭಿಸಿದರೂ ನೆರವು ನೀಡಲಾಗುವುದು. ಸರ್ಕಾರ ನೊಂದ ವಿದ್ಯಾರ್ಥಿ ಮತ್ತು ಕುಟಂಬದ ಸದಸ್ಯರೊಂದಿಗಿದೆ. ಎಂದೂ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com