'I have finished the monster..', 'ರಾಕ್ಷಸನನ್ನು ಕೊಂದು ಮುಗಿಸಿದೆ': Om Prakash ಕೊಲೆ ಬಳಿಕ ಕರೆ​ಮಾಡಿದ್ದ ಪತ್ನಿ ಪಲ್ಲವಿ, ಆಸ್ತಿ ವಿಚಾರಕ್ಕೆ ಹತ್ಯೆ?

ತಂಗಿ ಹೆಸರಿನಲ್ಲಿ ಆಸ್ತಿ ಮಾಡಿದ್ದಕ್ಕೆ ಹಲವು ದಿನಗಳಿಂದ ಓಂ ಪ್ರಕಾಶ್​ ಮತ್ತು ಅವರ ಪತ್ನಿ ಪಲ್ಲವಿ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ.
Karnataka's Former Police Chief OM Prakash
ನಿವೃತ್ತ ಪೊಲೀಸ್​ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ
Updated on

ಬೆಂಗಳೂರು: ನಿವೃತ್ತ ಪೊಲೀಸ್​ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಹತ್ಯೆ ಬಳಿಕ ಅವರ ಪತ್ನಿ ಮಾಡಿದ್ದ ಕರೆಯೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನ (Bengaluru) ಹೆಚ್​ಎಸ್​ಆರ್​ ಲೇಔಟ್​ನಿವಾಸದಲ್ಲಿ ನಿವೃತ್ತ ಪೊಲೀಸ್​ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಅವರೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಪತಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯವರು 8 ರಿಂದ10 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Karnataka's Former Police Chief OM Prakash
ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಬರ್ಬರ ಕೊಲೆ

ರಕ್ತದ ಮಡುವಿನಲ್ಲಿ ಬಿದ್ದಿದ್ದ ಓಂ ಪ್ರಕಾಶ್

ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬೆಂಗಳೂರಿನ (Bengaluru) ಹೆಚ್​ಎಸ್​ಆರ್​ ಲೇಔಟ್​​ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಚಾಕು ಇರಿತದಿಂದ ಓಂ ಪ್ರಕಾಶ್​ಅವರ ಎದೆ, ಹೊಟ್ಟೆ ಹಾಗೂ ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಇನ್ನು, ಹೊಟ್ಟೆ ಭಾಗಕ್ಕೆ ಸುಮಾರು 4-5 ಬಾರಿ ಚಾಕುವಿನಿಂದ ಇರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ.

ಮನೆಯ ಪಡಸಾಲೆ ತುಂಬ ರಕ್ತ ಹರಿದಿದೆ. ಓಂ ಪ್ರಕಾಶ್​ ಅವರು ಸುಮಾರು 15-20 ನಿಮಿಷಗಳ ಕಾಲ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಪತಿಯ ನರಳಾಟವನ್ನು ಪತ್ನಿ ಪಲ್ಲವಿ ನೋಡುತ್ತಾ ನಿಂತಿದ್ದರು ಎಂಬ ಮಾಹಿತಿ ದೊರೆತಿದೆ. ನಂತರ, ಪತ್ನಿ ಪಲ್ಲವಿಯವರು ಹೆಚ್​ಎಸ್​ಆರ್ ಲೇಔಟ್ ಪೊಲೀಸರಿಗೆ​ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಕೌಟುಂಬಿಕ ಕಲಹ?

ಮೂರು ದಿನಗಳ ಹಿಂದೆ IPS ಫ್ಯಾಮಿಲಿ ವಾಟ್ಸಾಪ್ ಗ್ರೂಪ್​ನಲ್ಲಿ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿಯವರು, “ನನ್ನ ಪತಿ ನನಗೆ, ಮಗಳಿಗೆ ತುಂಬಾ ಚಿತ್ರಹಿಂಸೆ ಕೊಡುತ್ತಿದ್ದಾರೆ. ಮನೆಯಲ್ಲಿ ನನ್ನ ಪತಿ ಗನ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಶೂಟ್ ಮಾಡಿ ಕೊಲೆ ಮಾಡುತ್ತೇನೆ ಎಂದು ಭಯಪಡಿಸುತ್ತಿದ್ದಾರೆ. ಹೀಗಾಗಿ, ಪತಿ ವಿರುದ್ಧ ಸುಮೊಟೋ ಕೇಸ್ ದಾಖಲಿಸುವಂತೆ” ಮೆಸೇಜ್ ಮಾಡಿದ್ದರಂತೆ.

Karnataka's Former Police Chief OM Prakash
ರೌಡಿಗಳಿಗೆ ಸಿಂಹಸ್ವಪ್ನವಾಗಿದ್ದ ಓಂ ಪ್ರಕಾಶ್ ಪತ್ನಿಯಿಂದಲೇ ಕೊಲೆಯಾಗಿದ್ದೇಕೆ?: ಇಲ್ಲಿದೆ ಅಸಲಿ ಕಾರಣ!

'ರಾಕ್ಷಸನನ್ನು ಕೊಂದು ಮುಗಿಸಿದೆ'; ಪತ್ನಿ, ಪುತ್ರಿ ವಶಕ್ಕೆ

ಇನ್ನು, ಪತಿ ಓಂ ಪ್ರಕಾಶ್​ಮೃತಪಟ್ಟ ಬಳಿಕ, ಪತ್ನಿ ಪಲ್ಲವಿಯವರು ಮತ್ತೋರ್ವ ನಿವೃತ್ತ ಡಿಜಿ ಮತ್ತು ಐಜಿಪಿಯ ಪತ್ನಿಗೆ ವಿಡಿಯೋ ಕರೆ ಮಾಡಿ, ‘I have Finished monster’ ಅಂತ ಎಂದಿದ್ದರಂತೆ. ಅಲ್ಲದೆ ಕೊಲೆ ಬಳಿಕ ಓಂ ಪ್ರಕಾಶ್ ಅವರ ಮುಖವನ್ನು ಬಟ್ಟೆಯಿಂದ ಮುಚ್ಚಲಾಗಿತ್ತು ಎನ್ನಲಾಗಿದೆ. ಕೊಲೆ ಬಳಿಕ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಮತ್ತು ಪುತ್ರಿ ರೋಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಪೊಲೀಸರು ಹೋಗಿ ಹರಸಾಹಸಪಟ್ಟು ಬಾಗಿಲು ತೆಗೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಪ್ರಕರಣ ಸಂಬಂಧ ಪೊಲೀಸರು ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಆಸ್ತಿ ವಿಚಾರಕ್ಕೆ ಹತ್ಯೆ?

ಇನ್ನು, ಓಂ ಪ್ರಕಾಶ್ ಅವರನ್ನು ಕೊಲೆ ಮಾಡಲು ಕಾರಣಗಳೇನು? ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ? ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಆಸ್ತಿ ವಿಚಾರಕ್ಕೆ ಕೊಲೆಯಾಗಿದೆ ಎಂಬ ಅನುಮಾನವೂ ವ್ಯಕ್ತವಾಗಿದೆ. ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ದಾಂಡೇಲಿಯಲ್ಲಿ ಆಸ್ತಿ ಹೊಂದಿದ್ದರು. ಈ ಆಸ್ತಿಯನ್ನು ಓಂ ಪ್ರಕಾಶ್ ಅವರು ತಮ್ಮ ತಂಗಿಯ ಹೆಸರಿಗೆ ಮಾಡಿದ್ದರು.

ತಂಗಿ ಹೆಸರಿನಲ್ಲಿ ಆಸ್ತಿ ಮಾಡಿದ್ದಕ್ಕೆ ಹಲವು ದಿನಗಳಿಂದ ಓಂ ಪ್ರಕಾಶ್​ ಮತ್ತು ಅವರ ಪತ್ನಿ ಪಲ್ಲವಿ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. ತಂಗಿ ವಿಚಾರವಾಗಿ ಮಾತನಾಡಬೇಡ ಅಂತ ಪತ್ನಿ ಪಲ್ಲವಿ ಅವರಿಗೆ ಓಂಪ್ರಕಾಶ್‌ ವಾರ್ನ್‌ ಮಾಡಿದ್ದರಂತೆ. ಈ ವಿಚಾರಕ್ಕೆ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com