ಸರ್ಕಾರನೇ ಹೇಳಿದೆ: ಹಿಂದೂಗಳೇ.. ನೀವು ಧೈರ್ಯವಾಗಿ ಮತಾಂತರ ಮಾಡಿ- ಚಕ್ರವರ್ತಿ ಸೂಲಿಬೆಲೆ

ಹಿಂದೂಗಳೇ ನೀವು ಧೈರ್ಯವಾಗಿ ಮತಾಂತರ ಮಾಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ.
Chakravarthy Sulibele
ಚಕ್ರವರ್ತಿ ಸೂಲಿಬೆಲೆ
Updated on

ಮಂಗಳೂರು: ಹಿಂದೂಗಳೇ ನೀವು ಧೈರ್ಯವಾಗಿ ಮತಾಂತರ ಮಾಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ಮಂಗಳೂರಿನ ಉಜಿರೆಯಲ್ಲಿ ನಡೆದ ರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರಾದರೂ ನಿಮ್ಮನ್ನು ಮತಾಂತರ ಆಗಿ ಎಂದ ಹೇಳಿದರೆ ನೀವು ನಮ್ಮ ಸಮಾಜ ನಿಮ್ಮನ್ನು ಪ್ರೀತಿಯಿಂದ ಸ್ವಾಗತಿಸುತ್ತೆ ಬನ್ನಿ ಎಂದು ಕರೆಯಿರಿ ಎಂದು ಹೇಳಿದರು.

ಇತ್ತೀಚೆಗೆ ಬಜರಂಗದಳದವರು ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಜಾಸ್ತಿ ಮಾಡಲು ಏನು ಐಡಿಯಾ ಇದೆ ಎಂದು ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಆದರೆ ನಮ್ಮ ಜನ ನಾಲ್ಕೈದು ಮಕ್ಕಳನ್ನ ಮಾಡ್ತಾರಾ? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಚರ್ ಹಾಕಲು ಕಳುಹಿಸಲು ಇಷ್ಟ ಇಲ್ಲ. ಅವರಿಗೆ ನಮ್ಮ ಮಕ್ಕಳು ಚೆನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಿ ಮಾಡಬೇಕು ಅನ್ನೋದಷ್ಟೇ ಇದೆ. ಹಾಗಾಗಿ ಓದಿಸೋ ತಾಕತ್ತು ಇಲ್ಲದ ಕಾರಣ ಒಂದು ಸಾಕು, ಎರಡು ಸಾಕು ಅಂತಾರೆ. ಹಾಗಾಗಿ ಸರ್ಕಾರ ನಮಗಾಗಿ ಮಾಡಿರೋ ಕಾನೂನುಗಳನ್ನು ಬಳಸಿಕೊಳ್ಳಿ ಎಂದು ಕರೆ ನೀಡಿದರು.

ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು. ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದು ಅಂತ. ಸರ್ಕಾರವೇ ಧೈರ್ಯವಾಗಿ ಹೇಳಿದೆ, ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ? ಜಗತ್ತಿನ ಯಾವ ರಾಷ್ಟ್ರದಲ್ಲೂ ಈ ರೀತಿಯ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ, ಸರ್ಕಾರವೇ ಅಧಿಕೃತವಾಗಿ ಹೇಳಿದೆ, ಮಾಡಲು ನಿಮಗೆ ಕಷ್ಟ ಏನು? ಎಂದು ಹೇಳಿದರು.

Chakravarthy Sulibele
CET ಜನಿವಾರ ವಿವಾದ: ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com