'ಕೃಷ್ಣದೇವರಾಯ ಸಮಾಧಿ' ಮೇಲೆ ಮಾಂಸ ಮಾರಾಟ: ಸರ್ಕಾರದ ನಿರ್ಲಕ್ಷ್ಯ ವಿರುದ್ಧ ಯತ್ನಾಳ್ ಕಿಡಿ

ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ [ASI] ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ.
ಸಮಾಧಿ ಸ್ಥಳದಲ್ಲಿ ಮಾಂಸ ಕತ್ತರಿಸುತ್ತಿರುವುದು.
ಸಮಾಧಿ ಸ್ಥಳದಲ್ಲಿ ಮಾಂಸ ಕತ್ತರಿಸುತ್ತಿರುವುದು.
Updated on

ಬೆಂಗಳೂರು: ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿ ಜಾಗವನ್ನು ಮಾಂಸದ ಮಾರುಕಟ್ಟೆಯಾಗಿ ಪರಿವರ್ತಿಸಲಾಗಿದ್ದು, ಇದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ.ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿದ್ದಾರೆ.

ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ [ASI] ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ, ಕಲೆ,ಸಾಹಿತ್ಯ ರಂಗಗಳ ಪೋಷಕ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ? ಎಂದು ಪ್ರಶ್ನಿಸಿದ್ದಾರೆ.

ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ, ಮಾಂಸವನ್ನು ಮಾರುತ್ತ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com